ಅನಾರೋಗ್ಯದಿಂದ ಬಳಲುತ್ತಿದ್ದ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆಗೆ ದಾಖಲಾಗಿದ್ದ ಸತ್ಯಪಾಲ್ ಸಿಂಗ್ ಮಲಿಕ್ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.
ಸತ್ಯಪಾಲ್ ಮಾಲಿಕ್ 2018ರಿಂದ 2019ರ ವರೆಗೆ ಸುಮಾರು ಒಂದು ವರ್ಷಗಳ ಕಾಲ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. 2019 ಆಗಸ್ಟ್ 5ರಂದು ಇವರ ಆಡಳಿತಾವಧಿಯಲ್ಲಿಯೇ ಜಮ್ಮು ಕಾಶ್ಮೀರಕ್ಕೆ 370ನೇ ವಿಧಿ ಪ್ರಕಾರ ನೀಡಲಾಗಿದ್ದ ವಿಶೇಷ ಸ್ಥಾನಮಾನದ ರದ್ದುಗೊಳಿಸಲಾಗಿತ್ತು.
ಮೂರು ಬಾರಿಯ ಸಂಸದ ಹಾಗೂ ಒಂದು ಬಾರಿ ಕೇಂದ್ರದಲ್ಲಿ ಸಹಾಯಕ ಸಚಿವರಾಗಿ ಸೇವೆ ಸಲ್ಲಿಸಿದ್ದ ಸತ್ಯಪಾಲ್ ಮಲಿಕ್ ಅವರನ್ನು ನಂತರ ಜಮ್ಮು ಕಾಶ್ಮೀರದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು.