ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬಿಎಸ್ಎನ್ಎಲ್ ಕಚೇರಿ ಬಳಿ ದುಷ್ಕರ್ಮಿಗಳು ಚಿತ್ತಾಕುಲ ನಿವಾಸಿ, ನಗರಸಭೆ ಮಾಜಿ ಸದಸ್ಯನನ್ನು ಇರಿದು ಕೊಲೆ ಮಾಡಿ ಪರಾರಿ ಆಗಿದ್ದಾರೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ.
ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ ಚಾಕು ಇರಿಯಲಾಗಿದೆ. ತಕ್ಷಣ ಸತೀಶ್ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಎಸ್.ಪಿ ಎಂ ನಾರಾಯಣ್ ಮಾಧ್ಯಮದವರೊಂದಿಗೆ ಮಾತನಾಡಿ, ಕೊಲೆಯಾದ ವ್ಯಕ್ತಿ ಮಾಜಿ ನಗರಸಭಾ ಸದಸ್ಯ, ರೌಡಿ ಶೀಟರ್, ಈತನ ಮೇಲೆ 9ಕ್ಕೂ ಹೆಚ್ಚು ಪ್ರಕರಣಗಳಿವೆ. ಬೆಳಗಿನ ಜಾವ ವಾಯು ವಿಹಾರಕ್ಕೆ ಬಂದಿದ್ದಾಗ ಚಾಕು ವಿನಿಂದ ಇರಿಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.