ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎಚ್.ಡಿ.ದೇವೇಗೌಡರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಸಂಪೂರ್ಣ ಚೇತರಿಸಿಕೊಂಡಿರುವ ಅವರನ್ನು ಸೋಮವಾರ ಬೆಳಿಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ದೇವೇಗೌಡರಿಗೆ 15 ದಿನಗಳ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಹಕರಿಸುವಂತೆ ಕುಟುಂಬದವರು ಮನವಿ ಮಾಡಿದ್ದಾರೆ.