ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜನ್ಮದಿನವನ್ನು ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿ ಆಚರಿಸುವ ಮೂಲಕ ಸಂಭ್ರಮಿಸಿದ್ದಾರೆ.
ಮೇ 18ರಂದು 92 ವರ್ಷ ಪೂರೈಸಿ 93ನೇ ವಸಂತಕ್ಕೆ ಕಾಲಿಡಲಿರುವ ಎಚ್.ಡಿ. ದೇವೇಗೌಡರಿಗೆ ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿಯೇ ಹುಟ್ಟುಹಬ್ಬ ಆಚರಿಸಿತು.
ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಮರಳುತ್ತಿದ್ದಾಗ ಏರ್ ಇಂಡಿಯಾ ಸಿಬ್ಬಂದಿ ವಿಶೇಷವಾಗಿ ಸಿದ್ಧಪಡಿಸಿದ ಕೇಕ್ ಕತ್ತರಿಸುವ ಮೂಲಕ ದೇವೇಗೌಡರು ಹುಟ್ಟುಹಬ್ಬ ಆಚರಿಸಿಕೊಂಡರು.
ವಿಮಾನ 35 ಸಾವಿರ ಅಡಿ ಎತ್ತರದಲ್ಲಿ ಹಾರಾಡುತ್ತಿದ್ದಾಗ ಏರ್ ಇಂಡಿಯಾ ಸಿಬ್ಬಂದಿ ಕೇಕ್ ತರಿಸಿ ಜನ್ಮದಿನದ ಶುಭ ಕೋರುವ ಮೂಲಕ ವಿಶೇಷವಾಗಿ ಸಂಭ್ರಮಿಸಿದರು.