ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಅವರಿಗೆ 85 ವರ್ಷ ವಯಸ್ಸಾಗಿತ್ತು.
ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಂಜೆ 5 ಗಂಟೆ ಸುಮಾರಿಗೆ ನಿಧನರಾದರು.
ಕೇಂದ್ರ ಸಚಿವ ಕುಮಾರಸ್ವಾಮಿ, ಶಾಸಕ ರೇವಣ್ಣ ಸೇರಿ ನಾಲ್ವರು ಗಂಡು ಇಬ್ಬರು ಹೆಣ್ಣು ಮಕ್ಕಳನ್ನು ಚೆನ್ನಮ್ಮ ಅಗಲಿದ್ದಾರೆ,ಅವರ ಅಳಿಯ ಮಂಜುನಾಥ್ ಲೋಕಸಭಾ ಸದಸ್ಯರಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಕಳೆದ ಎರಡು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಉಸಿರಾಟದ ಸಮಸ್ಯೆಯಿಂದಾಗಿ ಆರೋಗ್ಯದಲ್ಲಿ ಏರುಪೇರಾಗಿ ದ್ದರಿಂದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚೆನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.
2001ರ ಫೆಬ್ರವರಿ ತಿಂಗಳಲ್ಲಿ ಚೆನ್ನಮ್ಮ ಅವರು ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ದೇವೇಗೌಡ ಮತ್ತು ಕಾಳಮ್ಮ ದಂಪತಿಯ ಪುತ್ರಿಯ ಹಿರಿಯ ಮಗಳಾಗಿದ್ದ ಚೆನ್ನಮ್ಮ, ಅಂದಿನ ಕಾಲದಲ್ಲೇ ಎಸ್ ಎಸ್ ಎಲ್ ಸಿ ವರೆಗೆ ಶಿಕ್ಷಣ ಪೂರೈಸಿ 1954ರ ಮೇ 25ರಲ್ಲಿ ದೇವೇಗೌಡರನ್ನು ಮದುವೆಯಾಗಿದ್ದರು.ಮನೆಯ ಹಿರಿಯ ಮಗಳಾಗಿ ನಾಲ್ವರು ತಮ್ಮಂದಿರು ಮತ್ತು ಮೂವರು ತಂಗಿಯರಿಗೆ ತಾಯಿಯಂತೆ ಆಸರೆಯಾಗಿದ್ದರು.


