ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ

ಲಕ್ನೋ : ತೀವ್ರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಯುತ್ತಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರಗೊಂಡಿದ್ದು, ಅವರಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ.

89 ರ ಹರೆಯದ ಕಲ್ಯಾಣ್ ಸಿಂಗ್ ಅವರ ಸ್ಥಿತಿ ಮಂಗಳವಾರ ಸಂಜೆ ಗಂಭೀರವಾದ ನಂತರ ಅವರನ್ನು ತೀವ್ರ ನಿಗಾ ಘಟಕ (ಐಸಿಯು) ದಲ್ಲಿ ಇರಿಸಲಾಗಿದೆ ಎಂದು ವರದಿ ತಿಳಿಸಿದೆ. ಇನ್ನು, ಅವರ ಕ್ಲಿನಿಕಲ್ ಪ್ಯಾರಾಮೀಟರ್ ಗಳನ್ನು ತಜ್ಞ ಸಲಹೆಗಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನು, ಜುಲೈ 4 ರಂದು ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರನ್ನು ನೋಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದರು.

,

Leave a Reply

Your email address will not be published. Required fields are marked *