ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕರೆಯಲ್ಲಿ ನಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಅಬ್ದುಲ್ ರೆಹಮಾನ್ (9), ನಯಾಜ್(12), ಮದಿನಾ ಬಾನು(9), ಆರುನ್(8) ಮೃತಪಟ್ಟವರು. ಮಕ್ಕಳು ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಅರ್ಮನ್ ಎಂಬಾತ ಅಪಾಯದಿಂದ ಪಾರಾಗಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೆರೆ ಸಂಪೂರ್ಣ ಖಾಲಿಯಾಗಿ ಮಧ್ಯದಲ್ಲಿ ನೀರು ಇದ್ದು, ಆ ನೀರಿಗೆ ಬಿದ್ದ 4 ವರ್ಷದ ಮಗುವನ್ನು ರಕ್ಷಿಸಲೆಂದು ನಾಲ್ವರು ಮಕ್ಕಳು ಮುಂದಾಗಿ ಕೆರೆಯಲ್ಲಿ ಮುಳುಗಿ ಅಸು ನೀಗಿದ್ದಾರೆ.
ಈಜಲು ತೆರಳಿದ್ದ ಬಾಲಕ ಸಾವು
ವಿಜಯನಗರ ಹೂವಿನಹಡಗಲಿ ತಾಲೂಕಿನ ಮದಲಗಟ್ಟಿಯಲ್ಲಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ. ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮದ ನಿವಾಸಿ 16 ವರ್ಷದ ಜೀವನ್ ಮೃತಪ್ಟ ಬಾಲಕಿ.
ಕುಟುಂಬದವರೊಂದಿಗೆ ಮದಲಗಟ್ಟಿಯ ಆಂಜನೇಯ ಸ್ವಾಮಿಯ ದರ್ಶನಕ್ಕೆಂದು ಬಂದಿದ್ದ ಜೀವನ್, ನದಿಯಲ್ಲಿ ಈಜಲು ಇಳಿದಿದ್ದಾನೆ. ಬಾಲಕ ನೀರಿನಲ್ಲಿ ಮುಳುಗುವುದನ್ನು ನೋಡಿದ ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕನ ಮೃತದೇಹ ಹೊರತೆಗೆದಿದ್ದಾರೆ. ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆರೆಗೆ ಬಿದ್ದು ಬೈಕ್ ಸವಾರ ಸಾವು
ನೆಲಮಂಗಲದ ಕೆರೆಯ ಏರಿಯ ತಿರುವಿನಲ್ಲಿ ನಡೆದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಕೂಲಿಪುರ ಗ್ರಾಮದ 25 ವರ್ಷದ ಪ್ರಶಾಂತ್ ಮೃತಪಟ್ಟವ. ಪ್ರಶಾಂತ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ತಿರುವಿನಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


