Menu

ವಿಜಯಪುರದಲ್ಲಿ ಗಾಳಿ ಮಳೆಗೆ ಮನೆ ಚಾವಣಿ ಕುಸಿದು ನಾಲ್ವರ ಸಾವು

ವಿಜಯಪುರದ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಗಾಳಿ ಮಳೆಗೆ ಮನೆಯ ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ.

ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ ಬಡಿಗೇರ (9) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮನೆ ದುರಸ್ತಿ ಮಾಡಿಸುತ್ತಿದ್ದ ಗುರುನಾಥ ಬಡಿಗೇರ ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ರಾತ್ರಿ ಸುರಿದ ಮಳೆಗೆ ಮನೆಯ ಚಾವಣಿ ಕುಸಿದಿದೆ.  ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಶವ ಹೊರ ತೆಗೆಯಲು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ  ಮೂರು ದಿನಗಳ ಹಿಂದೆ  ಮಳೆಗೆ ಮನೆ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ತುಮಕೂರು ಗ್ರಾಮದ ಸಿದ್ದಪ್ಪ ಎಂಬವರ ಮನೆಯ ಗೋಡೆ ನಿರಂತರ ಮಳೆಗೆ ಕುಸಿದಿದೆ .ಈ ವೇಳೆ ಮನೆಯ ಅಂಗಳದಲ್ಲಿ ಮಕ್ಕಳು ಆಟವಾಡುತ್ತಿದ್ದರು. ಗೋಡೆ ಮಕ್ಕಳ ಮೇಲೆ ಬಿದ್ದು ಅಕ್ಷತಾ (8) ಎಂಬ ಬಾಲಕಿ ಸ್ಥಳದಲ್ಲೇ ಅಸು ನೀಗಿದ್ದಾಳೆ. ಇಬ್ಬರು ಮಕ್ಕಳು ಗಾಯಗೊಂಡಿದ್ದು,  ಯಾದಗಿರಿ ಯೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

Related Posts

Leave a Reply

Your email address will not be published. Required fields are marked *