Menu

Accident deaths: ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರ ಸಾರಿಗೆ ಬಸ್‌ ಅಪಘಾತ-ನಾಲ್ವರ ಸಾವು

ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಿರುಪತಿಯಿಂದ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಅಪಘಾತ ನಡೆದಿದೆ.

ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಅಪಘಾತದಲ್ಲಿ ಬಸ್​​ನಲ್ಲಿದ್ದ ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ 1 ವರ್ಷದ ಮಗು ಮೃತಪಟ್ಟಿದ್ದಾರೆ. 16 ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಚಾಲಕ  ನಿದ್ದೆ ಮಂಪರಿನಲ್ಲಿ ಒವರ್‌ಟೇಕ್ ಮಾಡಲು ಹೋಗಿ ಲಾರಿಗೆ ಹಿಂದಿನಿಂದ ಬಸ್‌ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.  ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Related Posts

Leave a Reply

Your email address will not be published. Required fields are marked *