ಒಂದೇ ಕುಟುಂಬದ ನಾಲ್ವರನ್ನು ವ್ಯಕ್ತಿಯೊಬ್ಬ ಕತ್ತಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದೆ.
ಪೊನ್ನಂಪೇಟೆ ತಾಲೂಕಿನ ಕೊಳತೋಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಫಿ ತೋಟದ ಲೈನ್ ಮನೆಯಲ್ಲಿ ಕರಿಯ (75) ಗೌರಿ (70) ನಾಗಿ (35) ಕಾವೇರಿ (7) ಹತ್ಯೆಗೊಳಗಾಗಿದ್ದು, 35 ವರ್ಷದ ಗಿರೀಶ್ ಎಂಬಾತ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಅಕ್ರಮ ಸಂಬಂಧದ ಕಾರಣ ಈ ಕಗ್ಗೊಲೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದ್ದು, ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.