Menu

ಬಂಗಾರಪೇಟೆ ಕುಪ್ಪನಹಳ್ಳಿ ಬಳಿ ಕಾರು ಬೈಕ್‌ ಡಿಕ್ಕಿಯಾಗಿ ನಾಲ್ವರ ಸಾವು

ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ಕು ಮಂದಿ ಅಸು ನೀಗಿದ್ದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ.

ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45) , ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಮೃತಪಟ್ಟವರು. ಸುಶ್ಮಿತಾ, ವಿರುತ, ಸುಜಾತ, ಸುನಿಲ್​ ಗಾಯಗೊಂಡವರು.

ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ.

Related Posts

Leave a Reply

Your email address will not be published. Required fields are marked *