ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು 9 ತಿಂಗಳ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. 18 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈಶಾನ್ಯ ದೆಹಲಿಯ ದಯಾಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಚಾಂದಿನಿ, ದಾನಿಶ್, ರೇಷ್ಮಾ ಮತ್ತು ನವೀದ್ ಎಂದು ಗುರುತಿಸಲಾಗಿದೆ. ಕಟ್ಟಡ ಕುಸಿದಾಗ 24 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ತೀವ್ರವಾಗಿ ಗಾಯಗೊಂಡಿದ್ದ 14 ಮಂದಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆಎಂದು ಪೊಲೀಸರು ತಿಳಿಸಿದ್ದಾರೆ.
ಎನ್‌ಡಿಆರ್‌ಎಫ್, ಡಾಗ್ ಸ್ಕ್ವಾಡ್, ದೆಹಲಿ ಪೊಲೀಸ್ ಮತ್ತು ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆಎಂದು ಸ್ಥಳೀಯ ಡಿಸಿಪಿ ಸಂದೀಪ್ ಮಾಹಿತಿ ನೀಡಿದ್ದಾರೆ.