Monday, September 07, 2026
Menu

ತಿರುಪತಿ ದೇಗುಲದಿಂದ ವಾಪಸಾಗುತ್ತಿದ್ದ ನಾಲ್ವರು ಕೋಲಾರದಲ್ಲಿ ಅಪಘಾತಕ್ಕೆ ಬಲಿ

ಕೋಲಾರ ತಾಲೂಕಿನ ದೊಡ್ಡಕಾರಿ ಬಳಿ ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಕಾರಿಡಾರ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಬೆಂಗಳೂರಿನ ವಿದ್ಯಾರಣ್ಯಪುರದ ಶಾರದಮ್ಮ(70), ದೀಕ್ಷಿತಾ (25), ದೇವೇಂದ್ರ ಕುಮಾರ್ (41), ಜಿಷ್ಣು (13) ಮೃತಪಟ್ಟವರು. ಚಾಲಕ ವಿಕಾಸ್, ನೀತು, ಆದ್ವಿಕ, ಕವಿತಾ ಗಾಯಾಳುಗಳು. ಇವರನ್ನು ಬಂಗಾರಪೇಟೆ, ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಟುಂಬಸ್ಥರು ತಿರುಪತಿಗೆ ಹೋಗಿ ತಿಮ್ಮಪ್ಪನ ದರ್ಶನ ಪಡೆದು ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ವಾಹನವನ್ನು ಪಕ್ಕಕ್ಕೆ ತಿರುಗಿಸುವ ವೇಳೆ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ಚಾಲಕ ಹೇಳಿಕೆ ನೀಡಿದ್ದಾರೆ. ಬೇತಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *