Tuesday, September 29, 2026
Menu

ಕೋರ್ಟ್‌ನಲ್ಲಿ ಕೆಲಸದ ಆಮಿಷ: ಜಡ್ಜ್‌ ಸಹಿ ನಕಲು ಮಾಡಿ 25 ಕೋಟಿ ರೂ. ವಂಚಿಸಿದ ದಂಪತಿ

ಕೋರ್ಟ್‍ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 500ಕ್ಕೂ ಹೆಚ್ಚು ಜನರಿಂದ 25 ಕೋಟಿ ರೂ.ಗೂ ಹೆಚ್ಚಿನ ಹಣ ಪಡೆದು ವಂಚಿಸಿದ ದಂಪತಿಯನ್ನು ಬೆಂಗಳೂರಿನಲ್ಲಿ  ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಬಂಧಿತ ಆರೋಪಿಗಳನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ.

ಇವರು ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಅಮಾಯಕರನ್ನು ಗುರುತಿಸಿ ವಂಚಿಸುತ್ತಿದ್ದರು. ಕೋರ್ಟ್‍ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸುವುದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಹಣ ಪಡೆದಿದ್ದಾರೆ. ಐನೂರಕ್ಕೂ ಹೆಚ್ಚು ಜನರಿಂದ 25 ಕೋಟಿ ರೂ.ಗೂ ಹೆಚ್ಚು ಹಣ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ.

ನ್ಯಾಯಾಧೀಶರ ಸಹಿಯನ್ನು ನಕಲು ಮಾಡಿ ಆರ್ಡರ್ ಪ್ರತಿ ಎಂದು ಅಮಾಯಕರನ್ನು ನಂಬಿಸಿದ್ದ ಈ ವಂಚಕರು ಕೆಲಸ ಕೇಳಿದಾಗ ನಾಳೆ ನಾಡಿದ್ದು ಎಂದು ಸುಳ್ಳು ಹೇಳುತ್ತಿದ್ದರು. ಕೊನೆಗೆ ಫೋನ್ ರಿಸೀವ್ ಮಾಡುತ್ತಿರಲಿಲ್ಲ. . ಮೋಸ ಹೋಗಿರುವುದು ಗೊತ್ತಾದ ಬಳಿಕ ಸಂತ್ರಸ್ತರು ಸಿಸಿಬಿಗೆ ದೂರು ನೀಡಿದ್ದರು.

ಆರೋಪಿಗಳು ವಂಚನೆಗಾಗಿ ಜಾಲ ಸೃಷ್ಟಿಸಿ, ಜನರನ್ನು ನಂಬಿಸಲು, ಹಣ ಪಡೆಯಲು ಏಜೆಂಟ್‍ಗಳನ್ನು ನೇಮಿಸಿಕೊಂಡಿದ್ದರು. ದಾಖಲೆ ಪರಿಶೀಲನೆ ಎಂದು ಖಾಸಗಿ ಹೋಟೆಲ್‍ಗೆ ಕರೆಸಿಕೊಂಡು ಬೇರೆಯವರಿಗೆ ಆಫರ್ ಲೆಟರ್ ಬಂದಿದೆ ಎಂದು ನಕಲಿ ಆಫರ್ ಲೆಟರ್ ತೋರಿಸುತ್ತಿದ್ದರು.

ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲೂ ಸಂತ್ರಸ್ತರಿಂದ ದೂರು ದಾಖಲಾಗಿದೆ. ಈ ಹಿಂದೆ ಕೂಡ ಸರ್ಕಾರಿ ಕೆಲಸ ಕೊಡಿಸುವುದಾಗಿ ದಂಪತಿ ವಂಚಿಸಿದ್ದರು. 2024 ರಲ್ಲಿ ಬಂಧನಕ್ಕೊಳಗಾಗಿ ರಿಲೀಸ್ ಆಗಿದ್ದರು. ಮತ್ತೆ ಅದೇ ಕೆಲಸ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *