Menu

70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ 5 ಲಕ್ಷ ರೂಪಾಯಿ ಉಚಿತ ಆರೋಗ್ಯ ವಿಮೆ

ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ 5 ಲಕ್ಷ ರೂಪಾಯಿಗಳವರೆಗೆ ಉಚಿತ ಆರೋಗ್ಯ ವಿಮೆ ಲಭ್ಯವಾಗಲಿದೆ.

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಈ ಯೋಜನೆ ಜಾರಿಗೆ ಬರಲಿದೆ. ಯೋಜನೆಯಡಿ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗೆ 5 ಲಕ್ಷ ರೂಪಾಯಿಗಳವರೆಗೆ ಉಚಿತ ಆರೋಗ್ಯ ಸೇವೆ ಒದಗಿಸಲಾಗುವುದು. ಆದಾಯದ ಮಿತಿಯಿಲ್ಲದೆ ಎಲ್ಲರಿಗೂ ಈ ಯೋಜನೆಯ ಲಾಭ ಪಡೆಯಲು ಅವಕಾಶವಿದೆ.

ಯೋಜನೆಯ ಫಲಾನುಭವಿಗಳಾಗಲು ಹಿರಿಯ ನಾಗರಿಕರು ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಕಾರ್ಡ್ ಹೊಂದಿರಬೇಕು. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು ಮಾತನಾಡಿ, ಆಯುಷ್ಮಾನ್ ಭಾರತ್ ಯೋಜನೆಯಿಂದ ಈಗಾಗಲೇ ದೇಶಾದ್ಯಂತ 4.5 ಕೋಟಿ ಕುಟುಂಬಗಳು ಪ್ರಯೋಜನ ಪಡೆದುಕೊಳ್ಳುತ್ತಿವೆ. ಇನ್ಮುಂದೆ ಆದಾಯ ಅಥವಾ ಸಾಮಾಜಿಕ ಸ್ಥಾನಮಾನವನ್ನು ಲೆಕ್ಕಿಸದೆ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಈ ಆರೋಗ್ಯ ವಿಮೆಯ ಲಾಭವನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.

ಯೋಜನೆಯಡಿ ಹಿರಿಯ ನಾಗರಿಕರಿಗೆ ವಿಶಿಷ್ಟ ಗುರುತಿನ ಕಾರ್ಡ್‌ ನೀಡಲಾಗುವುದು. ಈ ಕಾರ್ಡ್‌ನೊಂದಿಗೆ ವರ್ಷಕ್ಕೆ 5 ಲಕ್ಷ ರೂಪಾಯಿಗಳವರೆಗೆ ಆರೋಗ್ಯ ವಿಮೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯು 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನಗದುರಹಿತ ಆಸ್ಪತ್ರೆ ಸೌಲಭ್ಯವನ್ನು ಒದಗಿಸುವ ಯೋಜನೆ. ಹಿರಿಯ ನಾಗರಿಕರಿಗೆ ಯಾವುದೇ ಆರ್ಥಿಕ ತೊಂದರೆಯಿಲ್ಲದೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನು ಇದರ ಒದಗಿಸುವುದು. ಔಷಧಿಗಳು, ವೈದ್ಯರ ಶುಲ್ಕ, ಆಸ್ಪತ್ರೆಗೆ ಪೂರ್ವ ಮತ್ತು ನಂತರದ ರೋಗನಿರ್ಣಯ, ಔಷಧಿಗಳು ಮುಂತಾದವುಗಳನ್ನು ಒಳಗೊಂಡಿದೆ.

Related Posts

Leave a Reply

Your email address will not be published. Required fields are marked *