Menu

ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ: ಹಂದಿ ಸಾಗಾಟ ನಿಷೇಧ

swine flu

ಚಿಕ್ಕಬಳ್ಳಾಪುರ: ಆಫ್ರಿಕನ್ ಹಂದಿ ಜ್ವರ ಕರ್ನಾಟಕದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದು, ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದಲ್ಲಿರುವ ಫಾರ್ಮ್ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ಹಂದಿ ಸಾಗಾಟ ನಿಷೇಧಿಸಲಾಗಿದೆ.

ಆಗಸ್ಟ್ 19ರಿಂದ 10 ದಿನಗಳ ಅಂತರದಲ್ಲಿ ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರದಿಂದ 100ಕ್ಕೂ ಹೆಚ್ಚು ಹಂದಿಗಳು ಮೃತಪಟ್ಟಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 57 ಹಂದಿಗಳನ್ನು ಸಾಯಿಸಲು ನಿರ್ಧರಿಸಲಾಗಿದೆ.

ಲ್ಯಾಬ್​ ವರದಿಯಲ್ಲಿ ಆಫ್ರಿಕನ್​ ಹಂದಿ ಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ಎಚ್ಚೆತ್ತ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹಂದಿಗಳ ರಕ್ತದ ಸ್ಯಾಂಪಲ್ ಗಳನ್ನು ಭೋಪಾಲ್​ ರಾಷ್ಟ್ರೀಯ ಲ್ಯಾಬ್​ಗೆ ಕಳುಹಿಸಲಾಗಿದ್ದು, ಲ್ಯಾಬ್​ ವರದಿಯಲ್ಲಿ ಆಫ್ರಿಕನ್​ ಹಂದಿ ಜ್ವರ ದೃಢಪಟ್ಟಿದೆ.

ಪಶುಪಾಲನಾ, ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ರಂಗಪ್ಪ ಈ ಬಗ್ಗೆ ಮಾತನಾಡಿ, ಕಳೆದ ಒಂದು ವಾರದಿಂದ ಫಾರ್ಮ್​ನಲ್ಲಿ ಹಂದಿಗಳು ಸಾಯುತ್ತಿರುವ ಬಗ್ಗೆ ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಹಂದಿ ಜ್ವರ ದೃಢಪಟ್ಟ ಕಾರಣ ಸದ್ಯ ಫಾರ್ಮ್​ನಿಂದ ಹಂದಿಗಳ ಸಾಗಟವನ್ನು ನಿಷೇಧಿಸಲಾಗಿದೆ ಎಂದರು.

ಆಫ್ರಿಕನ್ ಹಂದಿ ಜ್ವರ ಸಾಂಕ್ರಾಮಿಕ ರೋಗ. ದೇಶೀಯ ಮತ್ತು ಕಾಡು ಹಂದಿಗಳಿಗೆ ಈ ರೋಗ ಹರಡುತ್ತದೆ. ರೋಗಕ್ಕೆ ತುತ್ತಾದ ಹಂದಿಗಳು ಸಾವನ್ನಪ್ಪುತ್ತವೆ. ಈ ಜ್ವರಕ್ಕೆ ನಿರ್ದಿಷ್ಟ ಔಷಧಿ ಮತ್ತು ಚಿಕಿತ್ಸೆ ಇಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಜ್ವರ ದೃಢಪಟ್ಟ ಸ್ಥಳದಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಲ್ಲಲಾಗುತ್ತದೆ. ಸೋಂಕಿತ ಹಂದಿಗಳಿಂದ ಮನುಷ್ಯನಿಗೆ ರೋಗ ಹರಡುವುದಿಲ್ಲ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.

Related Posts

Leave a Reply

Your email address will not be published. Required fields are marked *