ಬೆಳಗಾವಿ ಬೈಲಹೊಂಗಲ ತಾಲೂಕಿನ ಗಿರಿಯಾಲ್ ಗ್ರಾಮದಲ್ಲಿ ಕೊಟ್ಟ ಸಾಲ ವಾಪಸ್ ಕೊಡದಿದ್ದಕ್ಕೆ ಸ್ನೇಹಿತನನ್ನು ಕೊಲೆ ಮಾಡಿ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
ಗಿರಿಯಾಲ‌್ ಗ್ರಾಮದ ಮಂಜುನಾಥ ಗೌಡರ (30) ಕೊಲೆಯಾದವ. ಕಳೆದ ವಾರ ಸ್ನೇಹಿತ ದಯಾನಂದ ಗುಂಡ್ಲೂರನಿಂದ 2 ಸಾವಿರ ಸಾಲ ಪಡೆದಿದ್ದ ಮಂಜುನಾಥ ವಾರದೊಳಗೆ ಹಣ ಮರಳಿ ಸುವುದಾಗಿ ಹೇಳಿದ್ದ. ಆದರೆ ಹೇಳಿದ ಸಮಯಕ್ಕೆ ವಾಪಸ್ ಕೊಟ್ಟಿರಲಿಲ್ಲ, ಈ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ನಡೆದು ವಿಕೋಪಕ್ಕೆ ತಿರುಗಿ ಮಂಜುನಾಥನ ಕೊಲೆಯಲ್ಲಿ ಅಂತ್ಯ ಕಂಡಿದೆ.
ಸಿಟ್ಟಿನಲ್ಲಿ ಕೊಡಲಿಯಿಂದ ಹೊಡೆದು ಮಂಜುನಾಥನನ್ನು ಹತ್ಯೆ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಅಸು ನೀಗಿದ್ದ. ಮಂಜುನಾಥ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆರೋಪಿ ದಯಾನಂದ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯುತ್ ತಂತಿ ತಗುಲಿ ಯುವಕ ಸಾವು
ಬಾಗಲಕೋಟೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದ ಜಮೀನಿನಲ್ಲಿ ಯುವಕನಿಗೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾನೆ. ಸಿದ್ದಾಪುರ ಗ್ರಾಮದ ನಿವಾಸಿ ಶ್ರೀಶೈಲ್ ಗೋವಿಂದ ಗಸ್ತಿ (22) ಮೃತಪಟ್ಟವರು.
ಜಮೀನಿನಲ್ಲಿ ಕೋಳಿ ಫಾರ್ಮಗಾಗಿ ಶೆಡ್ ನಿರ್ಮಿಸುವ ವೇಳೆ ತಂದೆ, ಸಹೋದರನ ಎದುರೇ ಈ ದುರಂತ ನಡೆದಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಯುವಕ ಅಸು ನೀಗಿದ್ದಾನೆ.
ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಕರಣ ದಾಖಲಾಗಿದೆ.


