ಮುಂದಿನ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸುವ ಕುರಿತು ಯಾವುದೇ ನಿರ್ಧಾರ ಇಲ್ಲ; ಗಾಲಿ ಜನಾರ್ಧನ ರೆಡ್ಡಿ

 

ಸಿಂಧನೂರು,ಮೇ.8,ಉದಯಕಾಲ ನ್ಯೂಸ್:‌ ಮುಂದಿನ ಸಾರ್ವತ್ರಿಕ ಚುನಾವಣೆಗೆ ಸಿಂಧನೂರಿನಿಂದ ಸ್ಪರ್ಧಿಸುವ ಯಾವುದೇ ನಿರ್ಧಾರ ಇಲ್ಲ ಎಂದು ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ ಹೇಳಿದರು.

ಇಂದು ಸಿಂಧನೂರಿನ ಗಾಂಧಿನಗರದ ಸ್ಪಟಿಕ ಲಿಂಗ ಮಹಾಗಿರಿ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮುಂದಿನ ಚುನಾವಣೆಗೆ ಸ್ಪರ್ಧಿಸುವ ಕುರಿತು ಮಾಧ್ಯಮವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಮುಂದಿನ ಚುನಾವಣೆಗೆ ನಾನು ಅಥವಾ ನನ್ನ ಶ್ರೀಮತಿಯಾಗಲಿ ಸ್ಪರ್ಧಿಸುವಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹೈಕಮಾಂಡ್‌ ಯಾರಿಗೇ ಟಿಕೆಟ್‌ ಕೊಟ್ಟರೂ ಅವರ ಗೆಲುವಿಗೆ ಶ್ರಮಿಸುತ್ತೇನೆ. ಪಕ್ಷ ಏನೇ ನಿರ್ಧಾರ ಮಾಡಿದರೂ ಅದಕ್ಕೆ ಬದ್ಧ ಎಂದು ತಿಳಿಸಿದರು.

ನಾನು ರಾಜಕೀಯ ಮಾಡಲು ಇಲ್ಲಿಗೆ ಬಂದಿಲ್ಲ. ನನ್ನ ಸ್ನೇಹಿತರು, ಸಹೋದರನ ಸ್ನೇಹಿತರು ಗಾಂಧಿನಗರದಲ್ಲಿ ಹೆಚ್ಚಾಗಿದ್ದಾರೆ. ಹಾಗಾಗಿ ನಾನು ಇಲ್ಲಿಗೆ ಬಂದಿದ್ದೇನೆ. ನಾನು ಚುನಾವಣೆಗೆ ಸ್ಪರ್ಧಿಸಬೇಕೆಂಬ ಕೂಗು ರಾಜ್ಯದ ಎಲ್ಲ ಕಡೆಯಿಂದ ಕೇಳಿ ಬಂದಿದೆ ಅದ್ಯಾಗೂ ನಾನು ಚುನಾವಣೆಗೆ ಸ್ಪರ್ಧಿಸುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

 

,

Leave a Reply

Your email address will not be published. Required fields are marked *