Monday, September 21, 2026
Menu

ಗಣೇಶ ವಿಸರ್ಜನೆ: ಕೆರೆಯಲ್ಲಿ ಮುಳುಗಿ ಯುವಕ ಸಾವು

ಶಿವಮೊಗ್ಗದ ಭದ್ರಾವತಿ ತಾಲೂಕಿನ ದೇವರಹಳ್ಳಿ ಗ್ರಾಮದ ಬಳಿ   ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಮೃತಪಟ್ಟಿರುವ ಘಟನೆ  ನಡೆದಿದೆ.

ದೇವರಹಳ್ಳಿ ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ೨೦ ವರ್ಷದ ರಾಕೇಶ್‌ ಮೃತಪಟ್ಟಿರುವ ಯುವಕ. ಈತ ಭದ್ರಾವತಿಯಲ್ಲಿ ಪದವಿ ಓದುತ್ತಿದ್ದ. ಭಾನುವಾರ ಸಂಜೆ ರಂಗನಾಥಪುರದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ. ಮೆರವಣಿಗೆ ರಾತ್ರಿ ದೇವರಹಳ್ಳಿ ಕೆರೆ ಬಳಿ ತಲುಪಿತ್ತು. ಗಣೇಶ ವಿಸರ್ಜನೆ ವೇಳೆ ಆಯತಪ್ಪಿ ರಾಕೇಶ್ ನೀರಿನಲ್ಲಿ ಮುಳುಗಿದ್ದಾನೆ. ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೆರೆಯಲ್ಲಿ ಗಿಡ-ಗಂಟಿ ಮತ್ತು ಹುಲ್ಲು ಹೆಚ್ಚಾಗಿದ್ದರಿಂದ ಶೋಧ ಕಾರ್ಯಕ್ಕೆ ಅಡ್ಡಿಯಾಗಿತ್ತು.

ಸೋಮವಾರ ಬೆಳಗ್ಗೆ ರಾಕೇಶ್ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ತುಮಕೂರು ತಾಲೂಕಿನ ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ವ್ಯಕ್ತಿ ವಿದ್ಯುತ್‌ ಸ್ಪರ್ಶಗೊಂಡು ಮೃತಪಟ್ಟಿದ್ದಾರೆ. ರಂಗಶಾಮಣ್ಣ (60) ಮೃತಪಟ್ಟವರು. ಜಮೀನಿನಲ್ಲಿ ಕೃಷಿ ಚಟುವಟಿಕೆಗೆಂದು ಹೋಗುವಾಗ ವಿದ್ಯುತ್ ತಂತಿ ಕಟ್ ಆಗಿ ನೆಲಕ್ಕೆ ಬಿದ್ದಿತ್ತು. ಇದನ್ನು ಗಮನಿಸದೆ ಸ್ಪರ್ಶಿಸಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ವಿದ್ಯುತ್ ತಂತಿಗಳ ನಿರ್ವಹಣೆ ಹಾಗೂ ಸುರಕ್ಷತೆ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಶಿರಾ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Posts

Leave a Reply

Your email address will not be published. Required fields are marked *