ದೆಹಲಿಯ ನಂಗ್ಲೋಯಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಸಂತ್ರಸ್ತೆಯ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಬಸ್ ಚಾಲಕ ಹಾಗೂ ನಿರ್ವಾಹಕನನ್ನು ಬಂಧಿಸಿದ್ದಾರೆ.
ರಾತ್ರಿ ಎಂದಿನಂತೆ ಕೆಲಸ ಮುಗಿಸಿ ಮಹಿಳೆ ಸರಸ್ವತಿ ವಿಹಾರ್ ಬಿ-ಬ್ಲಾಕ್ ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಒಂದು ಸ್ಲೀಪರ್ ಬಸ್ ಪಕ್ಕದಲ್ಲಿ ನಿಂತಿತ್ತು. ಬಸ್ಸಿನ ಬಾಗಿಲ ಬಳಿ ನಿಂತಿದ್ದ ಕಂಡಕ್ಟರ್ ಬಳಿ ಮಹಿಳೆ ಸಮಯ ಕೇಳಲೆಂದು ಮುಂದಾದಾಗ ಆಕೆಯನ್ನು ಬಲವಂತವಾಗಿ ಬಸ್ಸಿನೊಳಗೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿದೆ.
ದೆಹಲಿಯ ರಾಣಿಬಾಗ್ ಪ್ರದೇಶದಲ್ಲಿ ಈ ಕೃತ್ಯ ನಡೆದಿಎ. ಕಿ.ಮೀವರೆಗೆ ಬಸ್ ಚಲಿಸುತ್ತಲೇ ಇತ್ತು, ತಡರಾತ್ರಿ 2 ಗಂಟೆ ಮಹಿಳೆಯನ್ನು ಬಸ್ಸಿನಿಂದ ಹೊರದಬ್ಬಿದ್ದಾರೆ, ಮಹಿಳೆಗೆ ಗಾಯಗಳಾಗಿವೆ. ಹೆಚ್ಚಿನ ತನಿಖೆಗಾಗಿ ಕೃತ್ಯಕ್ಕೆ ಬಳಸಿದ ಬಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಿಂಬೆ ಕಿತ್ತ ಬಾಲಕನ ಥಳಿಸಿ ಕೊಲೆ
ನಿಂಬೆ ಹಣ್ಣು ಕಿತ್ತಿದ್ದಕ್ಕೆ ಬಾಲಕನಿಗೆ ಮನಬಂದಂತೆ ಥಳಿಸಿ ಕೊಲೆ ಮಾಡಿರುವ ಘಟನೆ ಬಿಹಾರದ ನಳಂದಾದ ಸಕ್ರವಾ ಗ್ರಾಮದಲ್ಲಿ ನಡೆದಿದೆ. ಸಕ್ರವಾ ಗ್ರಾಮದ ನಿವಾಸಿಯೊಬ್ಬರ ತೋಟದಿಂದ ಬಾಲಕ ಕೆಲವು ನಿಂಬೆಹಣ್ಣುಗಳನ್ನು ಕಿತ್ತಿದ್ದ. ಕೆರಳಿದ ಮಾಲೀಕ ಬಾಲಕನನ್ನು ಥಳಿಸಿ ಕೊಲೆ ಮಾಡಿದ್ದಾನೆ. ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿಲ್ಲ.
ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಗ್ರಾಮಸ್ಥರು ಅಡ್ಡಿಪಡಿಸಿ ಆಕ್ರೋಶ ವ್ಯಕ್ತಪಡಿಸಿದರು.ತೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.


