ಆರ್ಕೆಸ್ಟ್ರಾ ನರ್ತಕಿಯನ್ನು ಅಪಹರಿಸಿದ ದುಷ್ಕರ್ಮಿಗಳ ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಆರೋಪಿಯ ಫೋನ್ ಬಳಸಿ ಸಂತ್ರಸ್ತೆ 112 ತುರ್ತು ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.
ಪೊಲೀಸರು ಬಂದು ಆಕೆಯನ್ನು ರಕ್ಷಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಾಗಿಲು ಒಡೆದು ಪೊಲೀಸರು ಸಂತ್ರಸ್ತೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಾತ್ರಿ ಕಾರಿನಲ್ಲಿ ಬಂದ ಇಬ್ಬರು ಪುರುಷರು ಆಕೆಯನ್ನು ಅಪಹರಿಸಿ ಗೋಡೌನ್‌ಗೆ ಕರೆದೊಯ್ದಿದ್ದಾರೆ. ನಾಲ್ವರು ಪುರುಷರು ಈಗಾಗಲೇ ಅಲ್ಲಿದ್ದರು ಎಂದು ಆರೋಪಿಸಲಾಗಿದೆ.
ಬಲವಂತವಾಗಿ ಮದ್ಯ ಸೇವಿಸಿ ನೃತ್ಯ ಮಾಡಿಸಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ. ಆರು ಪುರುಷರು ಅತ್ಯಾಚಾರ ಎಸಗಿದ್ದಾರೆ. ಹಲ್ಲೆ ಮಾಡಿ ಕೋಣೆಯೊಳಗೆ ಕೂಡಿಹಾಕಿ ಐವರು ಪರಾರಿಯಾಗಿದ್ದಾರೆ. ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಒಳಗೆ ಮಲಗಿದ್ದ. ಆತನ ಫೋನ್ ಬಳಸಿ ಮಧ್ಯರಾತ್ರಿ ತುರ್ತು ಸಂಖ್ಯೆ 112 ಗೆ ಕರೆ ಮಾಡಿ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂತ್ರಸ್ತೆ ಒಳಗೆ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮದ್ಯದ ಬಾಟಲಿಗಳು ಕೋಣೆಯಲ್ಲಿ ಹರಡಿಕೊಂಡಿದ್ದವು, ಒಬ್ಬ ಕುಡಿದ ಮತ್ತಿನಲ್ಲಿ ಬಿದ್ದಿದ್ದ. ಸಂತ್ರಸ್ತೆಯನ್ನು ಪೂರ್ಣಿಯಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಜುನೈದ್ (35) ಎಂದು ಗುರುತಿಸಲಾಗಿದ್ದು, ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


