Tuesday, November 18, 2025
Menu

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 14 ಕೋಟಿ ರೂ ಮೌಲ್ಯದ ಗಾಂಜಾ ವಶ

ಬೆಂಗಳೂರು ದೇವನಹಳ್ಳಿಯ ಕೆಂಪೇಗೌಡ ಏರ್​​ಪೋರ್ಟ್‌ನಲ್ಲಿ 14 ಕೋಟಿ ರೂ ಮೌಲ್ಯದ ಮಾದಕ ವಸ್ತುವನ್ನು ಕಸ್ಟಮ್ಸ್‌ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಕಳೆದ 18 ದಿನಗಳಲ್ಲಿ ನಡೆಸಿದ ತಪಾಸಣೆಯಲ್ಲಿ 14.22 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ, ಇ-ಸಿಗರೇಟ್ ವಶಪಡಿಸಿಕೊಂಡಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ವಿದೇಶಗಳಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ 10 ಪ್ರಯಾಣಿಕರನ್ನು ಬಂಧಿಸಿದ್ದಾರೆ.

ವಿದೇಶಗಳಿಂದ ಬಂದ ಪ್ರಯಾಣಿಕರು ಬ್ಯಾಗ್‌ಗಳಲ್ಲಿ 38.64 ಕೆ.ಜಿ ಹೈಡ್ರೋಪೋನಿಕ್ಸ್ ಗಾಂಜಾ, 2.38 ಲಕ್ಷ ರೂ. ಮೌಲ್ಯದ ವಿದೇಶಿ ಇ-ಸಿಗರೇಟ್‌ಗಳು ಹಾಗೂ ಎಂಟು ಬಗೆಯ ಅಪರೂಪದ ಜೀವಂತ ಪ್ರಾಣಿಗಳನ್ನು ಸಾಗಿಸುತ್ತಿದ್ದರೆಂದು ಗೊತ್ತಾಗಿದೆ. ಪ್ರಯಾಣಿಕರ ಚೆಕಿಂಗ್ ವೇಳೆ ಸಂಶಯಾಸ್ಪದ ಬ್ಯಾಗ್‌ಗಳನ್ನು ಸ್ಕ್ಯಾನಿಂಗ್ ಮಾಡಿದಾಗ ಈ ಅಕ್ರಮ ವಸ್ತುಗಳು ಪತ್ತೆಯಾಗಿವೆ. ಕಸ್ಟಮ್ಸ್ ಆಕ್ಟ್ ಮತ್ತು ಸಂಬಂಧಿಸಿದ ಕಾನೂನುಗಳಡಿ ಪ್ರಕರಣ ದಾಖಲಿಸಿ, ಅಧಿಕಾರಿಗಳು ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

7. 70 ಕೋಟಿ ರೂ. ಮೌಲ್ಯದ ಮಾದಕ ವಸ್ತು

ಬೆಂಗಳೂರು ನಗರದಲ್ಲಿ ಸಿಸಿಬಿ ಮತ್ತು ಸ್ಥಳೀಯ ಪೊಲೀಸ್ ಠಾಣೆಗಳ ಕಾರ್ಯಾಚರಣೆ ನಡೆದಿದ್ದು, 7. 70 ಕೋಟಿ ರೂ. ಮೌಲ್ಯದ ಮಾದಕ ವಸ್ತು ಪತ್ತೆಯಾಗಿದೆ. 14 ವಿದೇಶಿ ಪ್ರಜೆಗಳನ್ನು ಒಳಗೊಂಡಂತೆ 19 ಆರೋಪಿಗಳನ್ನು ಬಂಧಿಸಲಾಗಿದೆ. ಸುದ್ದುಗುಂಟೆಪಾಳ್ಯ, ಮಹದೇವಪುರ, ವರ್ತೂರು ಮತ್ತು ಕೆ.ಜಿ.ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ದಾಳಿಗಳಲ್ಲಿ ಒಟ್ಟು 4.904 ಕೆ.ಜಿ. ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

 

Related Posts

Leave a Reply

Your email address will not be published. Required fields are marked *