ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹದೇವಪುರದ ನಾಗಪ್ಪ ರೆಡ್ಡಿ ಬ್ಲಾಕ್ ನಲ್ಲಿ ಗುರುವಾರ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ.
ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಛಿದ್ರಗೊಂಡು ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ. ನೀರು ಕಾಯಿಸಲು ಸಿಲಿಂಡರ್ ಆನ್ ಮಾಡಿದಾಗ ಈ ದುರಂತ ನಡೆದಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.