Thursday, February 12, 2026
Menu

ಗೀತಾ ಶಿವರಾಜ್‌ ಕುಮಾರ್‌ಗೆ ಸರ್ಜರಿ

ನಟ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಕುಟುಂಬದಿಂದ ಅಧಿಕೃತ ಮಾಹಿತಿ ಇನ್ನೂ ಲಭಿಸಿಲ್ಲ.

ಶಿವರಾಜ್​ಕುಮಾರ್ ಅವರು ಇತ್ತೀಚೆಗಷ್ಟೇ ಕ್ಯಾನ್ಸರ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಗೀತಾ ಶಿವರಾಜ್​ಕುಮಾರ್ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ಮೊದಲೇ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು. ಈಗ ಗೀತಾ ಸರ್ಜರಿ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಅವರು ಬೇಗ ಚೇತರಿಕೆ ಕಾಣಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ್ದ ಗೀತಾ ಅವರ ಸಹೋದರ ಹಾಗೂ ಸಚಿವ ಮಧು ಬಂಗಾರಪ್ಪ, ಗೀತಾರಿಗೆ ಸರ್ಜರಿ ಆಗಿದೆ ಎನ್ನುವ ಮಾಹಿತಿ ನೀಡಿದ್ದರು. ಆದರೆ ಕಾರಣ ಏನು ಎಂಬುದನ್ನು ಹೇಳಿರಲಿಲ್ಲ.

Related Posts

Leave a Reply

Your email address will not be published. Required fields are marked *