Sunday, September 28, 2025
Menu

ಚುನಾವಣಾ ರಾಜಕೀಯಕ್ಕೆ ಗೀತಾ ಶಿವರಾಜ್ ಕುಮಾರ್ ನಿವೃತ್ತಿ ಘೋಷಣೆ

ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೂತನವಾಗಿ ಆಯ್ಕೆಯಾದ ಶ್ವೇತಾ ಬಂಡಿಯ ಹುದ್ದೆ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದೇ ಇದ್ದರೂ ಪಕ್ಷದ ಸಂಘಟನೆಗಳಲ್ಲಿ ಜೊತೆಯಾಗಿ ಭಾಗವಹಿಸುತ್ತೇನೆ. ಪಕ್ಷ ಕರೆದರೆ ಯಾವಾಗಲೂ ಸಹಕರಿಸಲು ಸಿದ್ಧನಿದ್ದೇನೆ” ಎಂದು ತಿಳಿಸಿದರು.

ಶ್ವೇತಾ ಬಂಡಿಯನ್ನು ಕಳೆದ ಹತ್ತು ವರ್ಷಗಳಿಂದ ಪರಿಚಿತರಾಗಿದ್ದು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವುದು ಸಂತೋಷದ ವಿಷಯ. ಅವರು ಪಕ್ಷಕ್ಕಾಗಿ ಶ್ರಮಿಸಿದ ಹಿನ್ನೆಲೆಯಲ್ಲಿ ಈ ಹುದ್ದೆಯನ್ನು ಪಡೆದ್ದಿದ್ದಾರೆ ಎಂದು ಅಭಿಪ್ರಾಯಪಟ್ಟರು. “ನನ್ನ ಚುನಾವಣಾ ಪ್ರಚಾರದಲ್ಲಿ ಸಹ ಶ್ವೇತಾ ಬಂಡಿ ಶ್ರಮಿಸಿದ್ದಾರೆ. ಅವರಿಗೆ ಅಭಿನಂದನೆಗಳು” ಎಂದು ಹೇಳಿದರು.

ಮಹಿಳೆಯರು ಎಂದಿಗೂ ಅಬಲೆಯರಲ್ಲ; ಅವರಲ್ಲಿ ಶಕ್ತಿ ಇದ್ದರೆ ಯಾವುದೇ ಕೆಲಸವನ್ನು ಸಾಧಿಸಬಹುದು. ಶ್ವೇತಾ ಬಂಡಿಯನ್ನು ನಾನು ಕಳೆದ ಹತ್ತು ವರ್ಷಗಳಿಂದ ಪರಿಚಯಿಸುತ್ತಿದ್ದೇನೆ. ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತೇನೆ. ಯಾವ ಸಮಸ್ಯೆ ಇದ್ದರೂ ಮಧು ಬಂಗಾರಪ್ಪ ಅವರೊಂದಿಗೆ ಕೈ ಹಿಡಿದು ಕೆಲಸ ಮಾಡಿರಿ” ಎಂದು ಕಿವಿಮಾತು ಹೇಳಿದರು.

Related Posts

Leave a Reply

Your email address will not be published. Required fields are marked *