ಆಪರೇಷನ್ ಸಿಂಧೂರ್ ಬಳಿಕ ಭಯೋತ್ಪಾದನೆಗೆ ಭಾರತದ ಪ್ರತಿಕ್ರಿಯೆಯ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ತಿಳಿಸಿ ತಿಳಿಪಾಕಿಸ್ತಾನವನ್ನು ಜಗತ್ತಿನ ಮುಂದೆ ಬಯಲು ಮಾಡಲು ಕೊಲ್ಲಿ ರಾಷ್ಟ್ರಗಳಿಗೆ ಬಿಜೆಪಿ ಸಂಸದ ಬೈಜಯಂತ್ ಪಾಂಡಾ ನೇತೃತ್ವದ ಆಯೋಗ ಭೇಟಿ ನೀಡುತ್ತಿದೆ. ಅದರಲ್ಲಿರುವ .ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ.
ಸಂಸದ ಪಾಂಡಾ ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ನಮ್ಮ ನಿಯೋಗದ ಪ್ರವಾಸದ ಅರ್ಧದಾರಿಯಲ್ಲೇ ಗುಲಾಂ ನಬಿ ಆಜಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು ಎಂದು ಹೇಳಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ, ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುವುದು. ಬಹ್ರೇನ್ ಮತ್ತು ಕುವೈತ್‌ನಲ್ಲಿ ನಡೆದ ಸಭೆಗಳಲ್ಲಿ ಭಾಗಿಯಾಗಿದ್ದರು. ಸೌದಿ ಅರೇಬಿಯಾ ಮತ್ತು ಅಲ್ಜೀರಿಯಾದಲ್ಲಿ ಅವರ ಅನುಪಸ್ಥಿತಿ ಬೇಸರವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ.
ಕುವೈತ್‌ನಲ್ಲಿನ ತೀವ್ರ ಬಿಸಿಯಿಂದಾಗಿ ನನ್ನ ಆರೋಗ್ಯದ ಮೇಲೆ ಪರಿಣಾಮ ಬೀರಿದ್ದರೂ, ದೇವರ ದಯೆಯಿಂದ ನಾನು ಚೆನ್ನಾಗಿದ್ದೇನೆ. ಪರೀಕ್ಷೆಗಳ ಫಲಿತಾಂಶ ಗಳು ಸಾಮಾನ್ಯವಾಗಿವೆ. ನಿಮ್ಮ ಕಾಳಜಿ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಎಂದು ಗುಲಾಂ ನಬಿ ಪೋಸ್ಟ್ ಮಾಡಿದ್ದಾರೆ.
ಬೈಜಯಂತ್ ಪಾಂಡಾ ನೇತೃತ್ವದ ನಿಯೋಗದಲ್ಲಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಬಿಜೆಪಿ ಸಂಸದ ಫಾಂಗ್ನೋನ್ ಕೊನ್ಯಾಕ್, ಬಿಜೆಪಿ ಸಂಸದೆ ರೇಖಾ ಶರ್ಮಾ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸಂಸದ ಅಸಾದುದ್ದೀನ್ ಒವೈಸಿ, ಬಿಜೆಪಿ ಸಂಸದ ಸತ್ನಮ್ ಸಿಂಗ್ ಸಂಧು ಮತ್ತು ಭಾರತೀಯ ರಾಜತಾಂತ್ರಿಕ ಹರ್ಷ್ ಶ್ರಿಂಗ್ಲಾ ಇದ್ದಾರೆ.
ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಭಾರತದ ಕಾರ್ಯತಂತ್ರವನ್ನು ಬಲಪಡಿಸಲು ಕಳುಹಿಸಲಾದ ಉನ್ನತ ಮಟ್ಟದ ನಿಯೋಗದ ಸದಸ್ಯರಲ್ಲಿ ಒಬ್ಬರು ಕುವೈತ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಆತಂಕವಾಗುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.