ರಾಯಚೂರು ಜಿಲ್ಲೆಯಲ್ಲಿ ನಕಲಿ ವೈದ್ಯ ಬಳಿ ಚಿಕಿತ್ಸೆಗೆ ಹೋಗಿ ಇಂಜೆಕ್ಷನ್ ಚುಚ್ಚಿಸಿಕೊಂಡ ಬಾಲಕಿ ಮೃತಪಟ್ಟಿದ್ದಾಳೆ. ಮಸ್ಕಿ ತಾಲೂಕಿನ ಅಮಿನಗಢ ಗ್ರಾಮದ ಸಿಂಧೂ (13) ಇಂಜೆಕ್ಷನ್ ಪಡೆದ ನಂತರ ಮೃತಪಟ್ಟಾಕೆ.
ನಕಲಿ ವೈದ್ಯ ಉತ್ತಮ ಕುಮಾರ್ ಸರ್ಕಾರ್ ನೀಡಿದ ಚಿಕಿತ್ಸೆಯಿಂದ ಬಾಲಕಿ ಮೃತಪಟ್ಟಿದ್ದಾಗಿ ಪೋಷಕರು ಆರೋಪಿಸಿದ್ದು, ಕವಿತಾಳ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಸಿಂಧೂ ಜ್ವರದಿಂದ ಬಳಲುತ್ತಿದ್ದಳು, ಉತ್ತಮ ಕುಮಾರ್ ಸರ್ಕಾರ್ ಬಳಿ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಳು. ಚಿಕಿತ್ಸೆ ಬಳಿಕ ಪರೀಕ್ಷೆಗೆ ಹಾಜರಾಗಿದ್ದಳು. ಇಂಜೆಕ್ಷನ್ ಪಡೆದ ರಾತ್ರಿ ಸಿಂಧೂ ದೇಹದ ಮೇಲೆ ಗುಳ್ಳೆಗಳು ಕಾಣಿಸಿಕೊಂಡಿದ್ದು ನೋವಿನಿಂದ ನರಳಾಡಿದ್ದಾಳೆ. ಪೋಷಕರು ಕೂಡಲೇಮಾನ್ವಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸಾವು
ಹಾಸನದಲ್ಲಿ ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಈ ದುರಂತ ನಡೆದಿದೆ. ಚಿರಂತ್ (16) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಪರೀಕ್ಷೆ ಮುಗಿಸಿ ಬಸ್‍ನಲ್ಲಿ ಊರಿಗೆ ಬಂದಿದ್ದ ಬಾಲಕ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ವಿದ್ಯಾರ್ಥಿಗೆ ಡಿಕ್ಕಿಯಾಗಿ ಅಸು ನೀಗಿದ್ದಾನೆ. ಅತಿ ವೇಗ ಹಾಗೂ ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.


