Menu

ಯಾದಗಿರಿಯಲ್ಲಿ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ತುಮಕೂರು ಗ್ರಾಮದ ಸಿದ್ದಪ್ಪ ಎಂಬವರ ಮನೆಯ ಗೋಡೆ ನಿರಂತರ ಮಳೆಗೆ ಕುಸಿದಿದೆ .ಈ ವೇಳೆ ಮನೆಯ ಅಂಗಳದಲ್ಲಿ ಮಕ್ಕಳು ಆಟವಾಡುತ್ತಿದ್ದರು. ಗೋಡೆ ಮಕ್ಕಳ ಮೇಲೆ ಬಿದ್ದು ಅಕ್ಷತಾ (8) ಎಂಬ ಬಾಲಕಿ ಸ್ಥಳದಲ್ಲೇ ಅಸು ನೀಗಿದ್ದಾಳೆ. ಇಬ್ಬರು ಮಕ್ಕಳು ಗಾಯಗೊಂಡಿದ್ದು, ಕ್ಷಣವೇ ಯಾದಗಿರಿ ಯೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಪಂ ಸಿಇಒ ಲವೀಶ್ ಒರಡಿಯಾ ಮತ್ತು ಎಸ್ಪಿ ಪೃಥ್ವಿಕ ಶಂಕರ್ ಸ್ಥಳಕ್ಕೆ ತೆರಳಿ ಮಾಹಿತಿ ಪಡೆದುಕೊಂಡು ಗಾಯಾಳುಗಳ ಆರೋಗ್ಯದ ಬಗ್ಗೆ ವಿಚಾರಿಸಿದರು.

ಬೆಳಗಾವಿಯಲ್ಲಿ ಯುವತಿ ಆತ್ಮಹತ್ಯೆ

ಕೆಲವು ದಿನಗಳ ಹಿಂದೆಯಷ್ಟೇ ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಮಾಡಿಕೊಂಡಿದ್ದ ಯುವತಿ ಜನ್ಮದಿನದಂದು ಬೆಳಗಾವಿಯಅಜಂ ನಗರದ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ‌ (21) ಆತ್ಮಹತ್ಯೆ ಮಾಡಿಕೊಂಡ ಯುವತಿ , ಆಕೆ ಅಂತಿಮ ವರ್ಷದ ಬಿಎಸ್‌ಸಿ ಪದವಿ ಓದುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿದ್ದುಕೊಂಡು ಯುವತಿ ವ್ಯಾಸಂಗ ಮಾಡುತ್ತಿದ್ದಳು. ಕುಟುಂಬಸ್ಥರು ಪೊಲೀಸ್ ಪೇದೆ ಜೊತೆ ಮದುವೆ ನಿಶ್ಚಯ ಮಾಡಿದ್ದರು.

Related Posts

Leave a Reply

Your email address will not be published. Required fields are marked *