Menu

ಧಾರಾಕಾರ ಮಳೆಗೆ ಮೇಲ್ಛಾವಣಿಯ ಕಲ್ಲು ಬಿದ್ದು ಬಾಲಕಿ ಸಾವು

ಬಿರುಗಾಳಿ ಸಹಿತ ಧಾರಾಕಾರ‌‌ ಆಲಿಕಲ್ಲು ಮಳೆ ಸುರಿದ ರಭಸಕ್ಕೆ ಮನೆಯ ಮೇಲ್ಛಾವಣಿ ಮೇಲಿಟ್ಟಿದ್ದ ಕಲ್ಲು ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೀದರ್ ಹುಲಸೂರು ಪಟ್ಟಣದ ತಹಸೀಲ್ದಾರ್ ಕಚೇರಿ ಬಳಿ ನಡೆದಿದೆ.

ಮೂರು ವರ್ಷದ ಮಾಹೆರಾ ಪೈಸ್ ಇಸ್ಮಾಯಿಲ್ ಶೇಕ್ ಮೃತ ಬಾಲಕಿ. ಮನೆಯಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ಬಾಲಕಿಯನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾಳೆ. ಗಾಯಗೊಂಡ ಮೂವರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಮಹಾರಾಷ್ಟ್ರದ ಶಹಾಜನಿ ಔರಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಹಸೀಲ್ದಾರ್ ಶಿವಾನಂದ ಮೇತ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಲಕಿಗೆ ಸರಿಯಾದ ಚಿಕಿತ್ಸೆ ನೀಡಿಲ್ಲವೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಬಾಲಕ ಸಾವು

ಕೋಲಾರದ ಮಾಲೂರು ಲಕ್ಷ್ಮೀ ಸಾಗರದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಕಾರಿನಲ್ಲಿದ್ದ ಬಾಲಕ ಮೃತಪಟ್ಟಿದ್ದು, ಬಂಗಾರಪೇಟೆಯ ಮುಜಾಮಿಲ್ (9) ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಸಯ್ಯದ್ ಉಲ್ಲಾ, ಸಯ್ಯದ್ ಅಫ್ರಿದ್, ಯಾಸ್ಮಿನ್ ಹಾಗೂ ಅಸೀಬಾ ಅವರನ್ನು ಕೋಲಾರದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *