ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕಿ ಹಠಾತ್ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಕಾಳಂಗೇರಿಯ ದೀಕ್ಷಾ (12) ಮೃತ ಬಾಲಕಿ.
ಆರನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಶಾಲೆಗೆ ಹೋಗುತ್ತಿರಬೇಕಾದರೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ದೀಕ್ಷಾಳನ್ನ ಕೂಡಲೇ ಕುಟುಂಬಸ್ಥರು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ.
ಘಟನೆ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 35 ವರ್ಷದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸಂಡೂರು ತಾಲೂಕಿನ ತಾರಾನಗರದಲ್ಲಿ ನಡೆದಿದೆ. ರಾಜೇಶ್ ಹೃದಯಾಘಾತಕ್ಕೆ ಬಲಿಯಾದ ವ್ಯಕ್ತಿ. ರಾಜೇಶ್ ಸೋಮವಾರ ಸಂಜೆ ತಾರಾನಗರ ಗ್ರಾಮದ ಮನೆಲ್ಲಿರುವಾಗ ಎದೆ ನೋವು ಕಾಣಿಸಿಕೊಂಡಿದೆ. ಬಳ್ಳಾರಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಗಿದೆ. ತಾರಾನಗರದಿಂದ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯುತ್ತಿರುವಾಗಲೇ ರಾಜೇಶ್ ಅಸು ನೀಗಿದ್ದಾರೆ.
ಜಿಂದಾಲ್ ಕಾರ್ಖಾನೆಯಲ್ಲಿ ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಿದ್ದ ರಾಜೇಶ್‌ಗೆ ವಿವಾಹಆಗಿರಲಿಲ್ಲ. ಘಟನೆ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.