ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಬಾಲಕಿಯ ಜೊತೆ ಸ್ನೇಹ ಬೆಳೆಸಿ ಗರ್ಭಿಣಿ ಮಾಡಿದ್ದ ಯುವಕನನ್ನು ಮಾಗಡಿ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಮೂಲದ ನರಸಿಂಹಮೂರ್ತಿ (25) ಬಂಧಿತ ಆರೋಪಿ. ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನರಸಿಂಹಮೂರ್ತಿ ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡಿದ್ದ. ಕೆಲವು ದಿನಗಳ ನಂತರ ಸ್ನೇಹ ಬೆಳಸಿಕೊಂಡು ಸಲುಗೆ ಬೆಳೆದ ನಂತರ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿ ಬಾಲಕಿಯನ್ನು ಗರ್ಭಿಣಿ ಮಾಡಿದ್ದಾನೆ. ವಿಷಯ ತಿಳಿದ ಬಾಲಕಿ ಪೋಷಕರು ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ತನಿಖೆ ನಡೆಸಿದ ಪೊಲೀಸರು ಇನ್‌ಸ್ಟಾಗ್ರಾಮ್ ಐಡಿ ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಪೋಕ್ಸೊ ಕೇಸ್ ದಾಖಲಿಸಿದ್ದಾರೆ. ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.