ಮನೆ ಮುಂದೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿ ಗ್ರಾಮದಲ್ಲಿ ಧನ್ಯಬಾಯಿ (13) ಮತ್ತು ಚೈತ್ರಾಬಾಯಿ (13) ಅನುಮಾನಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ.
ಗುರುವಾರ (ಅ.2) ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಏಕಾಏಕಿ ನಾಪತ್ತೆಯಾಗಿದ್ದರು. ಈ ಕುರಿತು ಬಾಲಕಿಯರ ಕುಟುಂಬಸ್ಥರು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ನಾಪತ್ತೆಯಾಗಿದ್ದ ಬಾಲಕಿಯರು ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿಯಿರುವ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಡಿರಬಹುದು ಅಥವಾ ಬಾಲಕಿಯರು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ