ನಟ ಯಶ್ ಅಭಿಮಾನಿಗಳಿಗೆ ಇದೊಂದು ಸಿಹಿ ಸುದ್ದಿ, ರಾಮಾಯಣ ಚಿತ್ರದ ಗ್ಲಿಂಪ್ಸ್ ಜುಲೈ 3ಕ್ಕೆ ಬಿಡುಗಡೆಯಾಗಲಿದೆ. ಇದೇ ಮೊದಲ ಬಾರಿಗೆ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ.
ಜುಲೈ 3ರಂದು ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಮುಂಬೈನ ಮಧ್ಯಭಾಗದಲ್ಲಿರುವ ಮಲ್ಟಿಪ್ಲೆಕ್ಸ್‌ನಲ್ಲಿ ಈ ಸಿನಿಮಾ ಘೋಷಿಸಲಿದ್ದಾರೆ.
ಅಭಿಮಾನಿಗಳ ಸಮ್ಮುಖದಲ್ಲೇ ‘ರಾಮಾಯಣ’ ಚಿತ್ರದ ಫಸ್ಟ್ ಗ್ಲಿಂಪ್ಸ್ ಅನಾವರಣ ಆಗಲಿದೆ. ನಿತೇಶ್ ತಿವಾರಿ ನಿರ್ದೇಶನ ಚಿತ್ರಕ್ಕೆ ಯಶ್ ಕೂಡ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.
ಈ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್ ಆಗಲಿದೆ. ಮೊದಲ ಭಾಗ 2026ರ ದೀಪಾವಳಿಗೆ ಹಾಗೂ ಎರಡನೇ ಭಾಗ 2027ರ ದೀಪಾವಳಿಗೆ ರಿಲೀಸ್ ಆಗಲಿದೆ.