Saturday, September 12, 2026
Menu

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಜಾಮೀನು

ನಟಿ ರನ್ಯಾ ರಾವ್ ಅವರಿಗೆ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಚಿನ್ನ ಕಳ್ಳಸಾಗಣೆ ಆರೋಪದಡಿ ವಿಚಾರಣೆ ಎದುರಿಸುತ್ತಿದ್ದ ನಟಿ ರನ್ಯಾ ರಾವ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಪ್ರಕರಣದ ತನಿಖೆ ನಡೆಸಿದ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು, ವಾದ-ಪ್ರತಿವಾದಗಳನ್ನು ಆಲಿಸಿ ಜಾಮೀನು ನೀಡಲು ಸಮ್ಮತಿಸಿದೆ.

ಡಿಜಿಪಿ ರಾಮಚಂದ್ರರಾವ್‌ಗೆ ನಟಿ ರನ್ಯಾರಾವ್ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿತ್ತು. ಇದೇ ಪ್ರಕರಣದಲ್ಲಿ ಸರ್ಕಾರಿ ವಾಹನ ದುರ್ಬಳಕೆ ಮಾಡಿರುವುದಾಗಿ ರಾಮಚಂದ್ರರಾವ್‌ಗೆ ಚಾರ್ಜ್ ಮೆಮೋ ನೀಡಲಾಗಿತ್ತು. ರಾಮಚಂದ್ರರಾವ್ ಅವರ ಕಾರನ್ನು ರನ್ಯಾರಾವ್ ದುರ್ಬಳಕೆ ಮಾಡಿದ್ದರು.

ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಡಿಆರ್ ಐ ಅಧಿಕಾರಿಗಳು ಬೆಂಗಳೂರಿನಲ್ಲಿ ಉದ್ಯಮಿ ಪುತ್ರನನ್ನು ಬಂಧಿಸಿದ್ದರು. ಬೆಂಗಳೂರಿನ ಪಂಚತಾರಾ ಹೋಟೆಲ್ ನ ಮಾಲೀಕನ ತಮ್ಮ ಹಾಗೂ ಉದ್ಯಮಿ ಅವರ ಪುತ್ರ ತರುಣ್ ರಾಜು ಅವರನ್ನು ವಿಚಾರಣೆಗೊಳಪಡಿಸಿ ಬಂಧಿಸಿದ್ದರು. ರನ್ಯಾ ರಾವ್ ಮತ್ತುತರುಣ್ ರಾಜು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದು, ರನ್ಯಾ ರಾವ್ ಮೂಲಕ ತರುಣ್ ರಾಜು ಚಿನ್ನ ದುಬೈನಿಂದ ತರಿಸಿಕೊಳ್ಳುತ್ತಿದ್ದ ಎಂದು ಹೇಳಲಾಗಿದೆ.

 

Related Posts

Leave a Reply

Your email address will not be published. Required fields are marked *