Menu

ನ್ಯಾಮತಿಯಲ್ಲಿ ಕದ್ದ ಚಿನ್ನ ತಮಿಳುನಾಡಿನ ಪಾಳುಬಾವಿಯಲ್ಲಿ ಪತ್ತೆ

ದಾವಣಗೆರೆಯ ನ್ಯಾಮತಿ ಎಸ್‍ಬಿಐ ಬ್ಯಾಂಕ್ ದರೋಡೆ ಪ್ರಕರಣ ನಡೆದು ಆರು ತಿಂಗಳ ಬಳಿಕ ಚಿನ್ನಾಭರಣ ಸಮೇತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳ ವಿಚಾರಣೆ ವೇಳೆ ಚಿನ್ನ ಮುಚ್ಚಿಟ್ಟಿದ್ದು, ದರೋಡೆಗೆ ಕಾರಣ, ಸಂಚು ಮತ್ತಿತರ ವಿವರಗಳನ್ನು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿ, ಕಳವು ಮಾಡಿದ್ದ 17 ಕೆಜಿ ಚಿನ್ನ  ವಶಪಡಿಸಿಕೊಂಡಿದ್ದಾರೆ. ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ವಿಜಯ್ ಕುಮಾರ್ ಎಂಬುದು ಪತ್ತೆ ಆಗಿದೆ. ಆತ ನ್ಯಾಮತಿಯಲ್ಲಿ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಬ್ಯಾಂಕ್‍ನಲ್ಲಿ ಲೋನ್ ಪಡೆಯಲು ಎರಡು ಬಾರಿ ಅರ್ಜಿ ಹಾಕಿದ್ದ, ಈ ಅರ್ಜಿ ತಿರಸ್ಕೃತವಾಗಿತ್ತು. ಇದರಿಂದ ರೋಸಿ ಹೋಗಿದ್ದ ಆತ ಹಿಂದಿ ವೆಬ್ ಸೀರಿಸ್ ನೋಡಿ ಬ್ಯಾಂಕ್‌ ದರೋಡೆಗೆ ಸಂಚು ರೂಪಿಸಿದ್ದ.

ಆರೋಪಿಗಳು ಮೊಬೈಲ್, ವಾಹನ ಬಳಸದೆ ಯಾವ ಸಾಕ್ಷಿಯನ್ನೂ ಬಿಡದೆ ದರೋಡೆ ಮಾಡಿದ್ದರು. ದರೋಡೆ ಮಾಡಿದ 17 ಕೆಜಿ ಚಿನ್ನವನ್ನು ತಮಿಳುನಾಡಿನ ಮಧುರೈನಲ್ಲಿರುವ ತೋಟದ ಮನೆಯ ಪಾಳು ಬಿದ್ದ ಬಾವಿಯಲ್ಲಿ ಲಾಕರ್‌ನಲ್ಲಿ ಇಟ್ಟಿದ್ದರು.

ದರೋಡೆಗೆ ಮೊದಲು ಮತ್ತು ದರೋಡೆಯ ನಂತರ ದರೋಡೆಕೋರರು ಗಡಿ ಚೌಡಮ್ಮನ ಅಷ್ಟದಿಗ್ಬಂಧನ ಪೂಜೆ ಮಾಡಿದ್ದರು. ದರೋಡೆಯ ಮಾಹಿತಿಯನ್ನು ಕುಟುಂದ ಜೊತೆಯೂ ಹಂಚಿಕೊಂಡಿರಲಿಲ್ಲ. ಪೊಲೀಸರು ಆರೋಪಿಗಳನ್ನು ಟೆಕ್ನಿಕಲ್ ಎವಿಡೆನ್ಸ್ ಮೂಲಕ ಬಂಧಿಸಿದ್ದರು.

ಈ ಹಿಂದೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕರ್ನಾಟಕ ಬ್ಯಾಂಕ್‍ನಲ್ಲಿ ಎರಡು ಬಾರಿ ದರೋಡೆ ನಡೆದಿತ್ತು. ಈ ಪ್ರಕರಣಗಳಲ್ಲಿ ಇನ್ನೂ ದರೋಡೆಕೋರರ ಸುಳಿವು ಕೂಡ ಸಿಕ್ಕಿಲ್ಲ.

Related Posts

Leave a Reply

Your email address will not be published. Required fields are marked *