ಅತ್ತ ಸಿಎಂ @siddaramaiah ನವರು ಅತ್ಯಂತ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡುವ ಕನಸು ಕಾಣುತ್ತ ಔತಣಕೂಟ, ಸಮಾವೇಶ ಎಂದು ಸಂಭ್ರಮ ಪಡುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೊಸ ವರ್ಷದ ಮೊದಲ ವಾರದಲ್ಲೇ ರಾಜ್ಯದಲ್ಲಿ ಗುಂಡಾರಾಜ್ಯದ ಗದ್ದಲ ಸದ್ದು ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ.
ಸಾಮಾಝಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬಳ್ಳಾರಿಯಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರ ಮೇಲೆ ಕೊಲೆ ಯತ್ನ, ಯಲ್ಲಾಪುರದಲ್ಲಿ ಹಿಂದೂ ಹುಡುಗಿಯ ಹತ್ಯೆ, ಬೆಂಗಳೂರಿನಲ್ಲಿ ಓಂಶಕ್ತಿ ಭಕ್ತರ ಮೆರವಣಿಗೆ ಮೇಲೆ ಕಲ್ಲು ತೂರಾಟ, ಅಮಾಯಕ ಮಹಿಳೆಯರು-ಮಕ್ಕಳಿಗೆ ಗಾಯ… @INCKarnataka ಸರ್ಕಾರದ ತುಷ್ಟೀಕರಣ ರಾಜಕಾರಣದಿಂದಾಗಿ ಮತಾಂಧ ದುಷ್ಕರ್ಮಿಗಳ, ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸ ಮಿತಿ ಮೀರಿದೆ. ಬಹುಸಂಖ್ಯಾತರ ಧಾರ್ಮಿಕ ಆಚರಣೆಗಳಿಗೆ ರಕ್ಷಣೆ ಇಲ್ಲದಂತಾಗಿದೆ, ಜನಸಾಮಾನ್ಯರಿಗೆ ನೆಮ್ಮದಿ ಇಲ್ಲದಂತಾಗಿದೆ ಎಂದು ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ
ಗೂಂಡಾ ರಾಜ್ ಗ್ಯಾರೆಂಟಿ!ಅತ್ತ ಸಿಎಂ @siddaramaiah ನವರು ಅತ್ಯಂತ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡುವ ಕನಸು ಕಾಣುತ್ತ ಔತಣಕೂಟ, ಸಮಾವೇಶ ಎಂದು ಸಂಭ್ರಮ ಪಡುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೊಸ ವರ್ಷದ ಮೊದಲ ವಾರದಲ್ಲೇ ರಾಜ್ಯದಲ್ಲಿ ಗುಂಡಾರಾಜ್ಯದ ಗದ್ದಲ… pic.twitter.com/Uegh3heG5e
— R. Ashoka (@RAshokaBJP) January 5, 2026
ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿಗೂಂಡಾ ರಾಜ್ ಗ್ಯಾರೆಂಟಿ. ಕಾಂಗ್ರೆಸ್ ಸರಕಾರದ ಮೌನ ಮತ್ತು ನಿರ್ಲಕ್ಷ್ಯ ನಾಚಿಕೆಗೇಡು. ದ್ವೇಷ ಕೃತ್ಯ ಎಸಗುತ್ತಿರುವ ಜಿಹಾದಿ ಮನಸ್ಥಿತಿಯ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು. ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಹೇಳಿದ್ದಾರೆ.


