Saturday, February 21, 2026
Menu

ನೇಮಕ, ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ತಡೆಯುವುದು ಸರ್ಕಾರದ ಆಶಯ: ಸಿಎಂ

ಸರ್ಕಾರವು ಎಲ್ಲ ನೇಮಕಾತಿಗಳನ್ನು ಕೌನ್ಸೆಲಿಂಗ್ ಮೂಲಕ ಮಾಡುತ್ತಿದ್ದು, ಭ್ರಷ್ಠಚಾರ ತಡೆಯಲು ಸಾಧ್ಯವಾಗುತ್ತಿದೆ. ವೈದ್ಯರನ್ನು ಸೇರಿದಂತೆ  5700 ಹುದ್ದೆಗಳನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಠಾಚಾರವನ್ನು ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್ ಗಳ ಹಾವಳಿ ಹೆಚ್ಚುತ್ತಿದ್ದು, ಸರ್ಕಾರಿ ನೌಕರರು ಇದಕ್ಕೆ ಬಲಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಅಭಯ ಹಸ್ತ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣೆ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ವೈದ್ಯಕೇತರ ಸಿಬ್ಬಂದಿಯೂ  ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಕ್ಷೇತ್ರದ ಕೆಲಸ ಕಾರ್ಯಗಳಲ್ಲಿ ಜಾತಿಧರ್ಮಗಳ ಬೇಧಗಳನ್ನು ಮೀರಿ,ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ಇಂದು 1000 ಜನ ನೇಮಕಾತಿ ಆದೇಶಗಳನ್ನು ಪಡೆದು ಆರೋಗ್ಯ ಇಲಾಖೆಗೆ ಸೇರ್ಪಡೆಯಾಗಿರುವುದು ಸಂತೋಷದ ವಿಷಯ. ಇದು ಕೇವಲ ವೃತ್ತಿಯಲ್ಲ, ಜೀವ ಉಳಿಸುವ ಹಾಗೂ ರೋಗ ತಡೆಯುವ ಸಾರ್ಥಕ ಕಾರ್ಯವನ್ನೊಳಗೊಂಡಿದೆ ಎಂದು ಹೇಳಿದರು.

ನಮ್ಮ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದ ನಂತರ ಖಾಲಿ ಹುದ್ದೇಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದೆ. ನೇಮಕಾತಿಯಲ್ಲಿದ್ದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆ ಅತ್ಯಂತ ಅವಶ್ಯಕವಾಗಿದ್ದು, ಇಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡುತ್ತದೆ. 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದು, ಇವುಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದರು.

ವೈದ್ಯಕೇತರ ಸಿಬ್ಬಂದಿಯೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಇಲಾಖೆಯ ಕೆಲಸ ಕಾರ್ಯಗಳಲ್ಲಿ ಜಾತಿಧರ್ಮಗಳ ಬೇಧಗಳನ್ನು ಮೀರಿಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ರೋಗಿಗಳಿಗೆ ಚಿಕಿತ್ಸೆಯ ಸಂದರ್ಭದಲ್ಲಿ ಬೇಕಾಗುವ ರಕ್ತ ಪಡೆಯಲು ಯಾವುದೇ ಜಾತಿ ಧರ್ಮಗಳನ್ನು ಪರಿಗಣಿಸುವುದಿಲ್ಲ. ಆದರೆ ಜನರು ಗುಣಮುಖರಾದ  ತಕ್ಷಣ  ಜಾತಿಧರ್ಮಗಳ ಸುಳಿಯಲ್ಲಿ ಬೀಳುತ್ತಾರೆ. ರೋಗ ತಡೆಗಟ್ಟುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ದಿಸೆಯಲ್ಲಿ ಆರೋಗ್ಯ ಇಲಾಖೆ ಕಾರ್ಯ ತತ್ಪರರಾಗಬೇಕು. ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಸರ್ಕಾರ ಕಾರ್ಯಗತಗೊಳಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.

Related Posts

Leave a Reply

Your email address will not be published. Required fields are marked *