Thursday, January 30, 2025
Menu

ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಾನಂದಶ್ರೀ

ದೊಡ್ಡ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಅನುದಾನ ಕೊಡುತ್ತೀರಿ. ಅವರ ಮಾತುಗಳಿಗೆ ಮರಳಾಗಿ ಮನೆ ಬಾಗಿಲು ತೆರೆದಿಟ್ಟುಕೊಳ್ತೀರಿ. ಕಂಬಳಿ ಬಣ್ಣವನ್ನು ನೋಡಿದರೆ ಒಳಗೆ ಬಿಟ್ಟುಕೊಳ್ಳಲು ನಿಮಗೆ ಕಷ್ಟವಾಗುತ್ತದೆ.  ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಸಿದ್ದರಾಮಾನಂದಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇವದುರ್ಗದ ತಿಂಥಿಣಿಯಲ್ಲಿ ಮಾತನಾಡಿದ ಅವರು, ಕನಕಗುರು ಪೀಠ ಸ್ಥಾಪನೆ ನಂತರವೂ ಯಾರೂ ಕುರುಬ ಪೂಜಾರಿಗಳ ಕಷ್ಟ ಕೇಳಿಲ್ಲ. ವಿದ್ಯಾಕೇಂದ್ರ ಸ್ಥಾಪನೆಗೆ 13 ಎಕರೆ ಜಮೀನು ಇದೆ, ಅಭಿವೃದ್ಧಿ ಮಾಡಿ ಎಂದು ಹೇಳಿದ್ದೆ. ವರ್ಷಕ್ಕೊಮ್ಮೆಯಾದರೂ ಸಹಾಯಧನ ನೀಡಿ ಎಂದು ಮುಖ್ಯಮಂತ್ರಿಗಳಿಗೆ ಪೂಜಾರಿಗಳು ಮೂರು ಬಾರಿ ಕೇಳಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿ ಎರಡು ಬಾರಿ ಸಭೆ ಕರೆದು ಮುಂದೂಡಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ರಾಜ್ಯಾದ್ಯಂತ ದೇವಸ್ಥಾನಗಳು ಸರ್ಕಾರಿ ಜಾಗದಲ್ಲಿವೆ. ಆ ಜಾಗಗಳನ್ನು ಆಯಾ ದೇವಸ್ಥಾನಗಳ ಹೆಸರಿನಲ್ಲೇ ಮಾಡಬೇಕು. ಕಲಬುರ್ಗಿ‌ ವಿಶ್ವವಿದ್ಯಾಲಯದಲ್ಲಿನ ಬೀರ ದೇವರ ಆಸ್ತಿ, ಮಾಳಿಂಗ ರಾಯನ ಆಸ್ತಿ ಸೇರಿದಂತೆ ರಾಜ್ಯಾದ್ಯಂತ ಇರುವ ದೇವಸ್ಥಾನಗಳ ಆಸ್ತಿಗಳನ್ನು ಸರ್ಕಾರ ಮತ್ತು ಖಾಸಗಿಯವರು ಕಬ್ಜಾ ಮಾಡುತ್ತಿವೆ. ದೇವಸ್ಥಾನದ ಜಾಗಕ್ಕಾಗಿ ಬಡಪಾಯಿ ಕುರುಬ ಪೂಜಾರಿಗಳು ಪೊಲೀಸ್​ ಠಾಣೆ, ಕೋರ್ಟ್​ ಮೆಟ್ಟಿಲು ಹತ್ತುವಂತಾಗಿದೆ. ಇದನ್ನು ತಪ್ಪಿಸಲು ಅತಿಕ್ರಮಣ ಮಾಡಿಕೊಂಡಿರುವ ಭೂಮಿಯನ್ನು ಆಯಾ ದೇವಸ್ಥಾನಗಳ ಹೆಸರಿನಲ್ಲಿ ಮಾಡಬೇಕು ಎಂದು ಒತ್ತಾಯಿಸಿದರು.

Related Posts

Leave a Reply

Your email address will not be published. Required fields are marked *