Wednesday, February 11, 2026
Menu

ಬಿಜೆಪಿಯ ಭೂಕಾಂತ್‌ ಸಚಿವ ಸ್ಥಾನಮಾನ ವಾಪಸ್‌ ಪಡೆದ ಸರ್ಕಾರ

ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಭೂಕಾಂತ್‌ಗೆ ನೀಡಲಾಗಿದ್ದ ರಾಜ್ಯ ಸಚಿವ ಸಂಪುಟದ ಸ್ಥಾನವಮಾನವನ್ನು ಸರ್ಕಾರ ವಾಪಸ್‌ ಪಡೆದಿದೆ.

ಬಿಜೆಪಿ ನಾಯಕ ಭೂಕಾಂತ್‌ಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್​​ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕಾರ್ಯಕರ್ತರು ಮಾತ್ರವಲ್ಲದೆ ಡಿಕೆ ಸುರೇಶ್​​ ಕೂಡ ಈ ಕ್ರಮವನ್ನು ಲೇವಡಿ ಮಾಡದ್ದರು. ನಮ್ಮದು ಸರ್ವಧರ್ಮ ಪಾಲಿಸಿಯಾಗಿದ್ದು, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲರೂ ನಮ್ಮ ಪಕ್ಷದಲ್ಲೇ ಇದ್ದಾರೆ. ಹೀಗಾಗಿ ಎಲ್ಲ ವಿಚಾರದಲ್ಲೂ ಹೊರಗಿನಿಂದ ಬಂದ ಅತಿಥಿಗಳಿಗೆ ದ್ಯತೆ ನೀಡಿ, ಕಾಂಗ್ರೆಸ್ ಕಾರ್ಯಕರ್ತರಿಗೆ ಎರಡನೇ‌ ಆದ್ಯತೆ ನೀಡುತ್ತೇವೆ ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದರು.

ಇಷ್ಟೆಲ್ಲ ಬೆಳವಣಿಗೆ ಬೆನ್ನಲ್ಲೇ ಸರ್ಕಾರ ಅವರಿಗೆ ನೀಡಿದ್ದ ಸಚಿವ ಸ್ಥಾನಮಾನವನ್ನು ಹಿಂಪಡೆದಿದೆ. ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಅದರಲ್ಲಿ ಭೂಕಾಂತ್ ಸೇರಿದ್ದರು. ಅವರ ಪತ್ನಿ ಬಿಜೆಪಿಯಿಂದ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿದ್ದರು. ಹೀಗಾಗಿ ಕಾಂಗ್ರೆಸ್​​ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Related Posts

Leave a Reply

Your email address will not be published. Required fields are marked *