Menu

ಮೈಕ್ರೊ ಫೈನಾನ್ಸ್ ಗೆ ಕಡಿವಾಣ ಹಾಕುವ ಸುಗ್ರಿವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲ!

governer thawar chand gehlot

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್  ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ರಾಜ್ಯ ಸರ್ಕಾರದ  ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.

ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್  ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ರಾಜ್ಯ ಸರ್ಕಾರದ  ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.

 

ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ೫ ಲಕ್ಷ ದಂಡ‌ ಹೇಗೆ ಹಾಕುತ್ತೀರಾ? ಸಾಲ ಕೊಡುವಾಗ ಭದ್ರತೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದೀರಿ. ಆದರೆ ಇದು ಸರ್ಕಾರಿ ಬ್ಯಾಂಕ್ ಗಳಿಗೂ ಅನ್ವಯ ಮಾಡಿ ಅಂದರೆ ಹೇಗೆ ಎಂದು ರಾಜ್ಯಪಾಲರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಮೈಕ್ರೊ ಫೈನಾನ್ಸ್ ಕಂಪನಿಗಳ ಮೇಲೆ ೧೦ ವರ್ಷ ಶಿಕ್ಷೆಗೆ ಶಿಫಾರಸು ಮಾಡಿರುವುದರಲ್ಲಿ ಯಾವುದೇ ಲಾಜಿಕ್ ಕಾಣಿಸುತ್ತಿಲ್ಲ. ಅಲ್ಲದೇ ಸಾಕಷ್ಟು ಗೊಂದಲಗಳು ಇರುವುದರಿಂದ ಸದನದಲ್ಲಿ ಈ ಬಗ್ಗೆ ಚರ್ಚಿಸಿ ಮರು ಮಂಡಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.

Related Posts

Leave a Reply

Your email address will not be published. Required fields are marked *