Menu

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ: 6 ಮಂದಿ ಅರೆಸ್ಟ್

Dharmasthala Files

ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ.

ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಬಂಧಿತ ಆರೋಪಿಗಳು. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ನಡೆದ ಗುಂಪು ಘರ್ಷಣೆ ನಡೆದಿತ್ತು.

ಈ ಸಂದರ್ಭದಲ್ಲಿ ನಿಯಂತ್ರಣ ಮಾಡಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಪೊಲೀಸ್‌ ಅಧಿಕಾರಿಯಿಂದ ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಆರೋಪಿಗಳನ್ನು ಹುಡುಕುತ್ತಿದ್ದರು.

Related Posts

Leave a Reply

Your email address will not be published. Required fields are marked *