Tuesday, February 24, 2026
Menu

“ಗ್ಯಾರೆಂಟಿ ಹಠಾವೋ” ಆಂದೋಲನ ಶುರು?

R Ashoka
Guarantee Hathao R Ashoka

ಸಿಎಂ @siddaramaiah ನವರೇ, ಕಳೆದ ಮೂರು ವರ್ಷಗಳಲ್ಲಿ ವಿಪಕ್ಷಗಳು, ಮಾಧ್ಯಮದವರು ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಪ್ರಶ್ನೆ ಮಾಡಿದಾಗಲೆಲ್ಲಾ ತಿಪ್ಪೆ ಸರಿಸುವ ಮಾತಾಡಿ, ಸುಳ್ಳು ಹೇಳುತ್ತಲೇ ಬಂದಿದ್ದೀರಿ. ಈಗ ಮಾರ್ಚ್ 6ರಂದು ತಾವು ಮಂಡಿಸುವ ಬಜೆಟ್ ನಲ್ಲಿ “ಗ್ಯಾರೆಂಟಿ ಹಠಾವೋ” ಆಂದೋಲನ ಶುರುವಾಗುವ ಮುನ್ಸೂಚನೆಗಳು ಸಿಗುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ.

ಗ್ಯಾರೆಂಟಿ ಯೋಜನೆಗಳ ಬಗ್ಗೆ ರಾಜ್ಯದ ಜನರ ಮನದಲ್ಲಿ ಹಲವಾರು ಪ್ರಶ್ನೆಗಳಿವೆ. ಈಗಲಾದರೂ ರಾಜ್ಯದ ಜನತೆಗೆ ಸತ್ಯಾಂಶ ತಿಳಿಸಿ ಸ್ವಾಮಿ. ಅಸಲಿಗೆ ಗ್ಯಾರೆಂಟಿ ಯೋಜನೆಗಳ ಬಗ್ಗೆ ಐಡಿಯಾ ಕೊಟ್ಟಿದ್ದು ಯಾರು? ತಾವೋ, ಕೆಪಿಸಿಸಿ ಅಧ್ಯಕ್ಷರೋ, ಅಥವಾ ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಜ್ಞರೋ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ 5 ಗ್ಯಾರೆಂಟಿ ಯೋಜನೆಗಳನ್ನು ಘೋಷಿಸುವ ಮುನ್ನ ಇದಕ್ಕೆ ತಗುಲುವ ವೆಚ್ಚದ ಬಗ್ಗೆ ಅಂದಾಜು ಮಾಡಲಾಗಿತ್ತಾ?, ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಸಾಧ್ಯಾಧ್ಯಾತೆಗಳ ಬಗ್ಗೆ ಯಾರಾದರೂ ಆರ್ಥಿಕ ತಜ್ಞರ ಸಲಹೆ, ಅಭಿಪ್ರಾಯ ಪಡೆಯಲಾಗುತ್ತಾ ಅಥವಾ ಕೇವಲ  ಚುನಾವಣೆ ಗೆಲ್ಲುವ ಹಪಹಪಿಯಿಂದ ಯಾವುದೇ ಮುಂದಾಲೋಚನೆ ಇಲ್ಲದೆ ಬೇಕಾಬಿಟ್ಟಿ ಘೋಷಣೆ ಮಾಡಿದ್ದಾ ಎಂದು ಕಿಡಿ ಕಾರಿದ್ದಾರೆ.

ಪಂಚ ಗ್ಯಾರೆಂಟಿ ಯೋಜನೆಗಳ ಘೋಷಣೆ ಬಗ್ಗೆ ಹೈಕಮಾಂಡ್ ಸೇರಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಸರ್ವಾನುಮತ ಇತ್ತಾ? ಅಥವಾ ಭಿನ್ನಾಭಿಪ್ರಾಯಗಳು ಇದ್ದವಾ, ಬಜೆಟ್ ಮಂಡನೆಗೂ ಮುನ್ನ ಕರ್ನಾಟಕದ ಮತದಾರರನ್ನು ಕಾಡುತ್ತಿರುವ ಈ ಪ್ರಶ್ನೆಗಳಿಗೆ ಉತ್ತರಿಸಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಒಂದು ಶ್ವೇತಪತ್ರ ಹೊರಡಿಸಿ ಎಂದು ಆಗ್ರಹಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ಶಿವಮೊಗ್ಗದ ಸೂಳೆಬೈಲಿನಲ್ಲಿ ಗಾಂಜಾ ನಶೆಯಲ್ಲಿದ್ದ ಮತಾಂಧ ಪುಂಡರು SSLC ವಿದ್ಯಾರ್ಥಿ ಸಂಕೇತ್ ನನ್ನು ಅಮಾನುಷವಾಗಿ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ “ಬ್ರದರ್ಸ್” ಗಳಿಗೆ ಯಾವ ಮಟ್ಟದ ಸದರ ಕೊಟ್ಟಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನವಾಗಿದೆ ಎಂದು ದೂರಿದ್ದಾರೆ.

‘ಸರ್ವ ಜನಾಂಗದ ಶಾಂತಿಯ ತೋಟ’ದ ಕನಸು ಕಂಡಿದ್ದ ರಾಷ್ಟ್ರಕವಿ ಕುವೆಂಪು ಅವರ ತವರು ಜಿಲ್ಲೆ ಇವತ್ತು ಮತಾಂಧತೆಯ ಮಸಣವಾಗಿರುವುದಕ್ಕೆ @INCKarnataka ಪಕ್ಷದ ಓಲೈಕೆ ರಾಜಕಾರಣವೇ ನೇರ ಕಾರಣ ಎಂದು ಅಶೋಕ ಆರೋಪಿಸಿದ್ದಾರೆ.

Related Posts

Leave a Reply

Your email address will not be published. Required fields are marked *