ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಐದು ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ. 30-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ನಗರ, ಕೋಲಾರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಏ.21, 22 ರಂದು ಆಲಿಕಲ್ಲು ಸಹಿತ ಮಳೆಯಾಗಬಹುದು. ಒಂದು ವಾರಗಳ ಕಾಲ ರಾಜ್ಯದ 24 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30–50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಇನ್ನು ಮುಂದಿನ ಮೂರು ದಿನ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಏಪ್ರಿಲ್ 25 ಮತ್ತು 26ರ ಎರಡು ದಿನ ಕಾಲ ಬೆಂಗಳೂರಿನಲ್ಲಿಯೂ ಉತ್ತಮ ಮಳೆಯಾಗಲಿದೆ ಎಂದುಇಲಾಖೆ ಹೇಳಿದೆ. ಮುಂದಿನ ಒಂದು ವಾರ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಳಗ್ಗೆಯಿಂದ ಬಿಸಿಲು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಪೂರ್ವ ಮುಂಗಾರು ಅವಧಿಯಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.113ರಷ್ಟು ಹೆಚ್ಚಿನ ಮಳೆಯಾಗಿದೆ. ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದೆ. ಬ್ಯಾಡಗಿ, ರಾಣಿಬೆನ್ನೂರು ಸೇರಿದಂತೆ ಜಿಲ್ಲೆಯ ಮಳೆಯಾಗಿದೆ. ಜಿಲ್ಲೆಯ ಇನ್ನುಳಿದ ತಾಲೂಕುಗಳಲ್ಲಿ ಕೆಲವು ಕಡೆ ತುಂತುರು ಮಳೆಯಾಗಿದೆ.