ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ. ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಹೇಳಿದರು.
ಹೊಸಪೇಟೆ ಅಮರಾವತಿ ಪ್ರವಾಸಿ ಮಂದಿರದಲ್ಲಿ ಹಂಪಿ ಉತ್ಸವ-2026 ರ ಲಾಂಛನ ಬಿಡುಗಡೆ ಮಾಡಿ ಮಾತನಾಡಿ ಹಂಪಿ ಉತ್ಸವದ ಸಿದ್ಧತೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು.
ಫೆಬ್ರವರಿ 13ರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಉತ್ಸವದ ಯಶಸ್ವಿ ಆಚರಣೆಗಾಗಿ ಈ ಬಾರಿ ₹22 ಕೋಟಿ ರೂ. ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಳೆದ ವರ್ಷ 16 ಕೋಟಿ ಅನುದಾನ ನೀಡಲಾಗಿತ್ತು.
ರಾಷ್ಟ್ರ ಮತ್ತು ರಾಜ್ಯ ಮಟ್ಟದ ಖ್ಯಾತ ಕಲಾವಿದರನ್ನು ಆಹ್ವಾನಿಸುವ ಕುರಿತು ನಾಳೆ ಗುರುವಾರ ಬೆಳಿಗ್ಗೆ 11 ಗಂಟೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ಕಾರ್ಯಕ್ರಮಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.
ಹಂಪಿ ಉತ್ಸವದಲ್ಲಿ ಪ್ರತಿ ವರ್ಷದಂತೆ ಈ ಉತ್ಸವದಲ್ಲಿ ಯು ಸ್ಥಳೀಯ ಕಲಾವಿದರಿಗೂ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಾರಿಗೆ ಹಾಗೂ ಮೂಲಸೌಕರ್ಯಗಳ ಬಗ್ಗೆ ವಿಶೇಷ ಗಮನ ಹರಿಸಲಾಗುವುದು ಜಿಲ್ಲಾ ಉಸ್ತುವಾರಿ ಸಚಿವನಾಗಿ ಎರಡು ಉತ್ಸವಗಳನ್ನು ಯಶಸ್ವಿ ಮಾಡಲಾಗಿದ್ದು ಇದು ಮೂರನೇ ಉತ್ಸವವಾಗಿದ್ದು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಸಂಸದರಾದ ಈ.ತುಕಾರಾಂ, ಶಾಸಕರಾದ ಲತಾ ಮಲ್ಲಿಕಾರ್ಜುನ್, ಕಂಪ್ಲಿ ಗಣೇಶ್, ನಾ.ರಾ.ಭರತ್ ರೆಡ್ಡಿ, ಹುಡಾ ಅಧ್ಯಕ್ಷರಾದ ಹೆಚ್.ಎನ್.ಎಫ್ ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಸಿಇಓ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಪೊಲೀಸ್ ಅಧೀಕ್ಷಕಿ ಎಸ್.ಜಹ್ನಾವಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


