Menu

ಯುವತಿ ವಿಚಾರಕ್ಕೆ ಕಿರುಕುಳ: ಆಡಿಯೊ ರೆಕಾರ್ಡ್‌ ಮಾಡಿಟ್ಟು ಹಾಸನ ಯುವಕ ಸುಸೈಡ್‌

ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ ನಡೆದಿದೆ.

ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ಯುವಕ. ಗ್ರಾಮದ ಶಂಕರ, ದರ್ಶನ್, ಚೇತನ್, ದಿನೇಶ್ ಎಂಬವರು ಯುವತಿ ವಿಚಾರದಲ್ಲಿ ನನಗೆ ಕಿರುಕುಳ ನೀಡಿದ್ದಾರೆ. ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಡಿಯೋ ಆಧರಿಸಿ ಸೀಕೆರೆ ರೈಲ್ವೆ ಪೊಲೀಸ್ ಠಾಣೆಯ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಿಸಿಕೊಂಡಿದ್ದಾರೆ.

ಗಂಡನ ಕೊಲೆಗೈದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಗಂಡನ ಕೊಲೆ ಮಾಡಿದ್ದ ಪತ್ನಿ ಮತ್ತು ಪ್ರಿಯಕರನಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.  ಫ್ಲೋರಾ ನ್ಯಾನ್ಸಿ ಮತ್ತು ರಾಜಶೇಖರಯ್ಯ ಗಲ್ಲು ಶಿಕ್ಷೆಗೆ ಗುರಿಯಾದವರು. ಇಬ್ಬರಿಗೂ 14 ಲಕ್ಷ ರೂ. ದಂಡ ಹಾಗೂ ದೂರುದಾರರಿಗೆ ಪರಿಹಾರವಾಗಿ 5 ಲಕ್ಷ ರೂ. ನೀಡುವಂತೆ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ತೀರ್ಪು ನೀಡಿದ್ದಾರೆ.

ಭದ್ರಾವತಿಯ ಖಾಸಗಿ ನರ್ಸಿಂಗ್ ಹೋಮ್ ನಲ್ಲಿ ನರ್ಸ್ ಆಗಿ ಕೆಲಸ ಮಾಡ್ತಿದ್ದ ಸುರಗಿತೋಪಿನ ಗ್ರಾಮದ ಫ್ಲೋರಾ ನ್ಯಾನ್ಸಿಯ ಮದುವೆ 2014 ರಲ್ಲಿ ಸಂಬಂಧಿ ಪ್ರಕಾಶ್ ಬಾಬು ಜೊತೆ ಆಗಿತ್ತು. ಟ್ಯಾಕ್ಸಿ ಚಾಲಕನಾಗಿ ಪ್ರಕಾಶ್ ಬಾಬು ಕೆಲಸ ಮಾಡಿಕೊಂಡಿದ್ದರು.

ಮದುವೆಯಾಗಿ ಕೆಚು ವರ್ಷದ ಬಳಿಕ ಫ್ಲೋರಾ ನಾನ್ಸಿಗೆ ರಾಜಶೇಖರಯ್ಯ ಜೊತೆ ಸಂಬಂಧ ಬೆಳೆದಿತ್ತು. ಇದಕ್ಕೆ ಪತಿ ಪ್ರಕಾಶ್ ಬಾಬು ಆಕ್ಷೇಪ ವ್ಯಕ್ತಪಡಿಸಿದ್ದ. 2020ರ ಜ.15 ರಾತ್ರಿ ಮನೆಯಲ್ಲಿ ಪತಿಗೆ ಪಾನೀಯದಲ್ಲಿ ಮತ್ತು ಬರಿಸುವ ಮಾತ್ರೆ ಬೆರೆಸಿ ಕುಡಿಸಿದ್ದಳು. ಪತಿ ನಿದ್ರೆಗೆ ಜಾರಿದ ಬಳಿಕ ಪ್ರಿಯಕರನನ್ನು ಕರೆಸಿಕೊಂಡು ಕತ್ತು ಹಿಸುಕಿ ಕೊಲೆ ಮಾಡಿದ್ದರು.

ಶವವನ್ನು ಕಾರಲ್ಲಿ ತೆಗೆದುಕೊಂಡು ಹೋಗಿ ತರೀಕೆರೆ ಲಿಂಗದಹಳ್ಳಿ ಸಮೀಪದ ಭದ್ರಾ ನಾಲೆಗೆ ಎಸೆದು ಬಂದಿದ್ದರು. ಮೂರು ದಿನಗಳ ಬಳಿಕ ಶವ ಸಿಕ್ಕಿತ್ತು. ಮೃತನ ಸಹೋದರ ಫ್ರಾನ್ಸಿಸ್ ನೀಡಿದ ದೂರು ಆಧರಿಸಿ ತನಿಖೆ ಆರಂಭಿಸಿದ ಪೇಪರ್ ಟೌನ್ ಠಾಣೆ ಪೊಲೀಸರು ಪ್ರಕರಣದ ಸತ್ಯವನ್ನು ಬಯಲಿಗೆಳೆದಿದ್ದರು.

Related Posts

Leave a Reply

Your email address will not be published. Required fields are marked *