Menu

ರಾಜ್ಯದಲ್ಲಿ ರಣದೀಪ್‌ ಆಡಳಿತ ಜಾರಿಯಾಗಿದ್ಯಾ: ಆರ್‌. ಅಶೋಕ್‌

ರಾಜ್ಯದಲ್ಲಿ ರಣದೀಪ್ ಆಡಳಿತ ಜಾರಿಯಾಗಿದೆಯೇ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಶಾಸಕರು ಹಾಗೂ ಸಚಿವರ ಜತೆ ಸರಣಿ ಸಭೆಗಳನ್ನು ನಡೆಸಿರುವುದನ್ನು ಟೀಕಿಸಿ ಅಶೋಕ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಲಾಟರಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮೇಲೆ ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ವಿಶ್ವಾಸ ಕಳೆದುಕೊಂಡು ಕರ್ನಾಟಕದಲ್ಲಿ ರಣದೀಪ್ ಆಡಳಿತ ಹೇರಿದೆ. ನಾಳೆ ನಡೆಯುವ ಸಂಪುಟ ಸಭೆಯೂ ಸುರ್ಜೇವಾಲಾ ಅಧ್ಯಕ್ಷತೆಯಲ್ಲಿ ನಡೆಯುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್‌ಗಳಲ್ಲಿ ಅತೃಪ್ತ ಶಾಸಕರ ದೂರು ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ಸುರ್ಜೇವಾಲ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೆ ಬಂದು ತಾವೇ ಅಧ್ಯಕ್ಷತೆ ವಹಿಸಿದ್ದರೂ ಅಚ್ಚರಿಪಡಬೇಕಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತವಿಲ್ಲ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ಶಾಸಕರ ಬೆಂಬಲ ಇಲ್ಲ. ತಮಗೆ ಬೇಕಾದವರನ್ನು ಮುಖ್ಯಮಂತ್ರಿ ಆಗಿ ನೇಮಕ ಮಾಡಲು ರಾಹುಲ್‌ಗಾಂಧಿ ಅವರಿಗೂ ಶಕ್ತಿ ಇಲ್ಲ ಎಂದು ಟೀಕಿಸಿದ್ದಾರೆ.

Related Posts

Leave a Reply

Your email address will not be published. Required fields are marked *