ನಮ್ಮ ಮೆಟ್ರೋ ರೈಲಿನ ಪ್ರಯಾಣ ದರವನ್ನು ಏರಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ಹೇಳಲಾಗಿದೆ. ಈ ಮೂಲಕ ದರ ಏರಿಕೆ ಭೀತಿಯಲ್ಲಿದ್ದ ಮೆಟ್ರೋ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.
ಕರ್ನಾಟಕದಲ್ಲಿ ಸಿಬ್ಬಂದಿ ನಿರ್ವಹಣೆ ವೆಚ್ಚ ಭರಿಸುವ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಎಂಆರ್ ಸಿಎಲ್ ಸಂಸ್ಥೆ ಕೂಡ ಮೆಟ್ರೋ ಪ್ರಯಾಣ ದರ ಏರಿಕೆಗೆ ನಿರ್ಧರಿಸಿತ್ತು.
ಮೆಟ್ರೋ ಪ್ರಯಾಣ ದರವನ್ನು ಶೇ.೪೫ರಷ್ಟು ಏರಿಸುವ ಬಗ್ಗೆ ಆಡಳಿತ ಮಂಡಳಿ ನಿರ್ಧರಿಸಿದ್ದು, ಈ ಬಗ್ಗೆ ಕೇಂದ್ರದ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದರಿಂದ ಪ್ರಸಕ್ತ ವರ್ಷ ಮೆಟ್ರೋ ರೈಲು ಪ್ರಯಾಣ ದರ ಏರಿಕೆಯಾಗುವುದು ಅನುಮಾನವಾಗಿದೆ.