ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ನಾಡದೇವಿ ಹಾಸನಾಂಬೆ ದೇವಿಯ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದ್ದು, ಜಿಲ್ಲಾಡಳಿತದ ವ್ಯವಸ್ಥೆಯಿಂದ ಯಾವುದೇ ಗೊಂದಲವಿಲ್ಲದೇ ಭಕ್ತರು ದರ್ಶನ ಪಡೆಯುತ್ತಿದ್ದಾರೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭಕ್ತರು ಯಾವುದೇ ಗೊಂದಲ ಇಲ್ಲದೇ ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ ಎಂದರು.
ಪ್ರತಿದಿನ ಸುಮಾರು 2 ಲಕ್ಷ ಜನರು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ. ಅಕ್ಟೋಬರ್ 18ರೊಳಗೆ ಭಕ್ತರು ಬಂದು ಹಾಸನಾಂಬೆ ದರ್ಶನ ಪಡೆಯಬೇಕು ಎಂದು ಅವರು ಮನವಿ ಮಾಡಿದರು.
ಅಕ್ಟೋಬರ್ 15ರಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹಾಸನಾಂಬೆಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ ಎಂದು ಕೃಷ್ಣ ಭೈರೇಗೌಡ ತಿಳಿಸಿದರು.
ಹಾಸನಾಂಬೆಗೆ ಇದುವರೆಗೆ 91 ಸಾವಿರ ಭಕ್ತರು ಭೇಟಿ ನೀಡಿದ್ದು, ಕಳೆದ ಐದಾರು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ದಾಖಲೆ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ. ಮುಂದಿನ ದಿನಗಳಲ್ಲೂ ಯಾವುದೇ ಗೊಂದಲ ಆಗದಂತೆ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.