ಮಾಜಿ ಸಿಎಂ ಸಿದ್ದರಾಮಯ್ಯಗೆ ಟ್ವೀಟ್​ ಮೂಲಕ ಟಾಂಗ್ ಕೊಟ್ಟ ಹೆಚ್​ಡಿಕೆ!

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಿದ್ರೆ, ರಾಜ್ಯದಲ್ಲಿ 8 ಇಲ್ಲವೇ 10 ಸ್ಥಾನ ಗೆಲ್ಲಬಹುದಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚಿಗೆ ‘ಮೆಲುಕು’ ಹಾಕಿದ್ದರಿಂದಲೇ ನಾನು ಸಿದ್ಧೌಷಧದ ಬಗ್ಗೆ ನೆನಪಿಸಿಕೊಳ್ಳಬೇಕಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅವರ ಕನಸು-ಕನವರಿಕೆಗಳನ್ನು ಮೈತ್ರಿ ಸರ್ಕಾರ ಹೋದ ನಂತರವೂ ಜಪಿಸುತ್ತಿರುವುದರಿಂದಲೇ ಹಳೆಯದನ್ನು ನೆನಪಿಸಿಕೊಳ್ಳಬೇಕಾಯಿತು. ನಮ್ಮ ಅವರ ದೋಸ್ತಿ ಕಳಚಿದ ನಂತರ ಈ ಬಗ್ಗೆ ನಾನು ಮಾತನಾಡಿರಲಿಲ್ಲ. ಕಾಂಗ್ರೆಸ್ ನಾಯಕರೇ ಪದೇಪದೆ ಮೈತ್ರಿ ಮುಗಿದ ಅಧ್ಯಾಯ ಎಂದು ಈಗ ತುಟಿ ಬಿಚ್ಚುತ್ತಿರುವುದರಿಂದ ನಾನು ಮೌನ ಮುರಿಯಬೇಕಾಯಿತು ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಈಗ ಮರಣೋತ್ತರ ಪರೀಕ್ಷೆ ಬಗ್ಗೆ ರಾಗ ಎಳೆಯುತ್ತಿದ್ದಾರೆ. ಆದರೆ, ವರದಿಯಲ್ಲಿ ಏನಿದೆ ಎಂಬ ಸತ್ಯಾಂಶವನ್ನು ನಾನು ಹೇಳಿದರೆ ಆ ಭಾಷೆ ನನಗೆ ಅರ್ಥವಾಗಲಿಲ್ಲ ಎಂದು ಜಾರಿಕೊಳ್ಳುವುದು ತರವಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Leave a Reply

Your email address will not be published. Required fields are marked *