ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ನೀಡಿರುವ ಜಾಮೀನು ರದ್ದುಗೊಳಿಸಲು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.
ಪ್ರಸ್ತುತ ನಟ ದರ್ಶನ್ ಹಾಗೂ ಸಹಚರರಿಗೆ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಜುಲೈ 22ಕ್ಕೆ ಮುಂದುಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಸಹಚರರನ್ನು ಬಂಧಿಸಿದ ಕರ್ನಾಟಕದ ಪೊಲೀಸರು ಬಂಧನ ಕುರಿತ ಸಮಗ್ರ ದಾಖಲೆಗಳನ್ನು ಸುಪ್ರೀಂಕೋರ್ಟ್ ಮುಂದೆ ಹಾಜರುಪಡಿಸಿದರು. ದಾಖಲೆಗಳ ಪರಿಶೀಲಿಸಿದ ನಂತರ ದರ್ಶನ್ ಜಾಮೀನು ಯಾಕೆ ರದ್ದು ಮಾಡಬಾರದು ಎಂದು ಪ್ರಶ್ನಿಸಿತು.
ದರ್ಶನ್ ಕೃತ್ಯದಲ್ಲಿ ಭಾಗಿಯಾಗಿರುವುದಕ್ಕೆ ಯಾವುದೇ ಪುರಾವೆ ಇಲ್ಲ. ಅಲ್ಲದೇ ಬಂಧನ ಕ್ರಮವೇ ಸರಿಯಲ್ಲ ಎಂದು ದರ್ಶನ್ ಪರ ವಕೀಲ ಕಪಿಲ್ ಸಿಬಾಲ್ ವಾದಿಸಿದರು.
ಈ ವೇಳೆ ಸರ್ಕಾರದ ದಾಖಲೆಗಳನ್ನು ಪರಿಶೀಲಿಸಿದ್ದೇವೆ. ಹೈಕೋರ್ಟ್ ಆದೇಶದಲ್ಲಿ ಚಡಪಡಿಕೆ ಗಮನಿಸಿದ್ದೇವೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.
ದರ್ಶನ್ ಪರ ಇದುವರೆಗೆ ಸುಪ್ರೀಂಕೋರ್ಟ್ ನಲ್ಲಿ ವಾದ ಮಂಡಿಸಿದ್ದ ಮನು ಸಿಂಘ್ವಿ ಹಿಂದೆ ಸರಿದಿದ್ದು, ಕಪಿಲ್ ಸಿಬಾಲ್ ವಾದ ನಡೆಸಿದ್ದಾರೆ.